ಬಿರುಸುಗೊಂಡ ಮಳೆ, ಕೆಲವೆಡೆ ಹಾನಿ

ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಯ ಉಪಕಟ್ಟಡದ ಛಾವಣಿ ಕುಸಿದು ಹಾನಿಯಾಗಿರುವುದು.
ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಯ ಉಪಕಟ್ಟಡದ ಛಾವಣಿ ಕುಸಿದು ಹಾನಿಯಾಗಿರುವುದು.
Published on
ಸೋಮವಾರಪೇಟೆ: ತಾಲೂಕಿನಲ್ಲಿ ಮಂಗಳವಾರ ರಾತ್ರಿಯಿಂದ ಮಳೆ ಬಿರುಸುಗೊಂಡಿದ್ದು, ಕೆಲವೆಡೆ ಕಟ್ಟಡಕ್ಕೆ ಹಾನಿಯಾಗಿರುವ ಕುರಿತು ವರದಿಯಾಗಿದೆ.
ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಯ ಉಪ ಕಟ್ಟಡದ ಛಾವಣಿ ಕುಸಿದು ಶೇ.75ರಷ್ಟು ಹಾನಿಯಾಗಿದ್ದು, ಕಟ್ಟಡದಲ್ಲಿರುವ ಗ್ರಾಮ ಒನ್ ಕೇಂದ್ರ ಸ್ಥಳಾಂತರಿಸಲು ಸೂಚಿಸಲಾಗಿದೆ.
ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ಚೆನ್ನಮ್ಮ ಕಾಲೇಜು ಸಮೀಪ ಇರುವ ಕುಡಿಯುವ ನೀರಿನ ಟ್ಯಾಂಕ್ ಬಳಿ ನಿರ್ಮಿಸಲಾದ ತಡೆಗೋಡೆ ಕುಸಿದಿದ್ದು, ನೀರಿನ ಟ್ಯಾಂಕ್ ಕೂಡ ಶಿಥಿಲಾವಸ್ಥೆಯಲ್ಲಿದೆ. ಪಕ್ಕದಲ್ಲಿಯೇ ಶಾಲಾ ವಿದ್ಯಾರ್ಥಿಗಳ ಕೊಠಡಿ ಇದ್ದು ಅನಾಹುತ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ, ದುರಸ್ತಿಗೆ ಮನವಿ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net