

ಮಕ್ಕಳ ಸುರಕ್ಷತೆಗೆ ಸಂಬAಧಿಸಿದAತೆ ಸರ್ಕಾರ ಸಾಕಷ್ಟು ರಕ್ಷಣಾ ಕ್ರಮಗಳನ್ನು ತೆಗೆದುಕೊಂಡಿದೆ. ಸಂಕಷ್ಟ ಪರಿಸ್ಥಿತಿಯಲ್ಲಿ ಇರುವ ಯಾವುದೇ ಮಗು ದಿನದ 24 ಗಂಟೆಯೂ ಉಚಿತ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಈ ಸಂದರ್ಭ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಸಹಾಯವಾಣಿ ಘಟಕಗಳು ಸಂಕಷ್ಟದಲ್ಲಿ ಇರುವ ಮಕ್ಕಳನ್ನು ತ್ವರಿತವಾಗಿ ತಲುಪಿ ರಕ್ಷಣೆ ಮಾಡುವರು. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ರೀತಿಯ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವುದು, 14-18 ವಯೋಮಾನದ ಮಕ್ಕಳನ್ನು ಅಪಾಯಕಾರಿ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಬಾಲ್ಯ ವಿವಾಹ ತಡೆಯಲು ಗ್ರಾಮ ಪಂಚಾಯಿತಿ, ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಬಾಲ್ಯ ವಿವಾಹ ನಿಷೇಧಾಧಿಕಾರಿಗಳನ್ನು ನೇಮಿಸಲಾಗಿದೆ.