ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಘ ಚಾಲಕ ಚೆಕ್ಕೇರ ಮನು ಕಾವೇರಪ್ಪ ಮಾತನಾಡಿ, ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹಕ್ಕೆ ಒಳಗಾಗಿ ನಮ್ಮ ಸನಾತನ ಸಂಸ್ಕೃತಿಯನ್ನು ನಾವು ಇಂದು ಕಡೆಗಣಿಸುತ್ತಿರುವುದು ಸರಿಯಲ್ಲ. ದೇಶದ ಸುಭದ್ರತೆಗೆ ಕಾರಣವಾಗಿರುವ ನಮ್ಮ ಧರ್ಮವನ್ನು ಒಡೆಯುವ ಕೆಲಸ, ಹಲವು ವರ್ಷಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿದೆ. ಆದರೂ, ಸನಾತನ ಹಿಂದೂ ಧರ್ಮದ ಬೇರುಗಳು ಗಟ್ಟಿಯಾಗಿರುವ ಹಿನ್ನೆಲೆಯಲ್ಲಿ, ಹಲವು ಹೊಡೆತಗಳ ನಡುವೆಯೂ ಹಿಂದೂ ಧರ್ಮ ತನ್ನ ಅಸ್ಮಿತೆಯನ್ನು ಉಳಿಸಿಕೊಂಡಿದೆ ಎಂದರು.