ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಎಫ್‌ಎಂಸಿ ಕಾಲೇಜು ಹಿಂಭಾಗದ ಬಡಾವಣೆಯಲ್ಲಿ ವಾಸವಿದ್ದ ಡಾ. ಪಾರ್ಥಸಾರಥಿ ಎಂಬವರ ಅಣ್ಣ ವಯೋವೃದ್ಧರಾಗಿದ್ದು, ಅವರನ್ನು ನೋಡಿಕೊಳ್ಳುವ ಸಲುವಾಗಿ ಹೋಂ ನರ್ಸಿಂಗ್ ಕೆಲಸಕ್ಕೆ ಭದ್ರಪ್ಪ ಬಸಪ್ಪ ಹಡಪದನನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಈತ ಫೆ. 28ರಂದು ಮನೆಯಲ್ಲಿದ್ದ ಅಂದಾಜು 80 ಗ್ರಾಂ ಚಿನ್ನಾಭರಣ, 5,50,000 ರೂ. ನಗದು ಕಳವು ಮಾಡಿರುವ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.