ಕನ್ನಡ ಭವನದ ವತಿಯಿಂದ ನೀಡಲಾಗುವ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-2026ಗೆ ಭಾಜನರಾಗಿರುವ ಸಮುದಾಯದ ಸಾಧಕರನ್ನು ಕೊಡಗು ಜಿಲ್ಲಾ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಈಚೆಗೆ ಸನ್ಮಾನಿಸಿ ಗೌರವಿಸಲಾಯಿತು. ಮಡಿಕೇರಿಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಬಂಟರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿಗೆ ಭಾಜನರಾದ ಉಪನ್ಯಾಸಕಿ ಪ್ರತಿಮಾ ಹರೀಶ್ ರೈ, ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ನಿರೂಪಕಿ ಹರ್ಷಿತಾ ಶೆಟ್ಟಿ ಅವರನ್ನು ಅತಿಥಿಗಳು ಸನ್ಮಾನಿಸಿ, ಅಭಿನಂದಿಸಿದರು. ಜಿಲ್ಲೆಯ ಹೆಸರಾಂತ ಚಿತ್ರ ಕಲಾವಿದ ಬಿ.ಕೆ. ಗಣೇಶ್ ರೈ ಅವರನ್ನೂ ಸನ್ಮಾನಿಸಿ ಅಭಿನಂದಿಸಲಾಯಿತು.