ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಪುಷ್ಪಗಿರಿ, ಹೆಗ್ಗಡಮನೆ, ಬೆಟ್ಟದಳ್ಳಿ, ಕುಡಿಗಾಣ, ಶಾಂತಳ್ಳಿ, ಕೂತಿ ಹಾಗೂ ತೋಳುರುಶೆಟ್ಟಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಳೆ ಬಿರುಸು ಪಡೆದಿದೆ. ಬಿರುಗಾಳಿಯಿಂದ ಹಲವೆಡೆ ಮರಗಳು ಧರೆಗೆ ಉರುಳಿದ್ದು, ಕೆಲವೆಡೆ ವಿದ್ಯುತ್ ಕಂಬಗಳು ಹಾಗೂ 11 ಕೆವಿ ವಿದ್ಯುತ್ ತಂತಿಗಳ ಮೇಲೆ ಮರಗಳು ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.