ಮಕ್ಕಳಿಗೆ ಹಲವಾರು ತಿಂಡಿ ತಿನಿಸುಗಳ ಆಮಿಷವನ್ನು ಒಡ್ಡಿ ಮಾನವ ಕಳ್ಳ ಸಾಗಾಣಿಕೆಯನ್ನು ನಡೆಸುತ್ತಿದ್ದು, ಅಂತಹ ಪ್ರಕರಣಗಳು ಕಂಡುಬAದಲ್ಲಿ 1098 ಗೆ ಅಥವಾ ಪೊಷಕರು ಮತ್ತು ಶಿಕ್ಷಕರಿಗೆ ಮಾಹಿತಿಯನ್ನು ತಿಳಿಸಬೇಕು. ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮ, ಸೈಬರ್ ಕ್ರೈಂ, ಅತಿಯಾದ ಮೊಬೈಲ್ ಬಳಕೆಯ ದುಷ್ಪರಿಣಾಮ, ಕಡ್ಡಾಯ ಶಿಕ್ಷಣ ಮತ್ತು ಶಿಕ್ಷಣದ ಮಹತ್ವ, ಬೇಟಿ ಬಚಾವೋ ಬೇಟಿ ಪಡಾವೋ, ಏಕ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರಕುವ ಆರ್ಥಿಕ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಸರ್ಕಾರದಿಂದ ಲಭ್ಯವಾಗುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ಮಾಡಿದರು. ತುರ್ತು ಸಂದರ್ಭದಲ್ಲಿ ಸಹಾಯವಾಣಿ ಸಂಖ್ಯೆ 112, 1098, 181, 1930 ಗಳನ್ನು ಬಳಸಿಕೊಳ್ಳುವಂತೆ ಅರಿವು ಮೂಡಿಸಿದರು.