ವಿವಿಧ ಕಾರ್ಯಕ್ರಮಗಳ ಮೂಲಕ ಪ್ರತಿಭೆ ಗುರುತಿಸಿ

ಸೋಮವಾರಪೇಟೆ ಎಸ್‌ಜೆಎಂ ಶಾಲೆಯಲ್ಲಿ ನಡೆದ ಅಂತಾರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಹಿತಿ ನ.ಲ.ವಿಜಯ ವಿಜೇತರಿಗೆ ಬಹುಮಾನ ವಿತರಿಸಿದರು. ಮಾರಪ್ಪ, ಕಿರಣ್ ಕುಮಾರ್ ಇದ್ದರು.
ಸೋಮವಾರಪೇಟೆ ಎಸ್‌ಜೆಎಂ ಶಾಲೆಯಲ್ಲಿ ನಡೆದ ಅಂತಾರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಹಿತಿ ನ.ಲ.ವಿಜಯ ವಿಜೇತರಿಗೆ ಬಹುಮಾನ ವಿತರಿಸಿದರು. ಮಾರಪ್ಪ, ಕಿರಣ್ ಕುಮಾರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವೀರಶೈವ ಸಮಾಜದ ತಾಲೂಕು ಯುವ ಘಟಕದ ಅಧ್ಯಕ್ಷ ಡಿ.ವಿ. ಕಿರಣಕುಮಾರ್ ಅಭಿಪ್ರಾಯ
ಸೋಮವಾರಪೇಟೆ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಉತ್ತೇಜಿಸುವ ವಿವಿಧ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವುದರಿಂದ ಅವರಲ್ಲಿರುವ ಪ್ರತಿಭೆ ಗುರುತಿಸಲು ಹೆಚ್ಚಿನ ಅವಕಾಶ ಸಿಗುತ್ತದೆ ಎಂದು ವೀರಶೈವ ಸಮಾಜದ ತಾಲೂಕು ಯುವ ಘಟಕದ ಅಧ್ಯಕ್ಷ ಡಿ.ವಿ. ಕಿರಣಕುಮಾರ್ ಹೇಳಿದರು.
ಪಟ್ಟಣದ ಎಸ್‌ಜೆಎಂ ಶಾಲೆಯಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚೆಗೆ ಹಲವು ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದು, ಅವುಗಳ ಉಳಿವಿಗೆ ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಹೇಳಿದರು.
ದೇಶದ ಅನೇಕ ಸಾಧಕರು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿ ಹೆಚ್ಚಿನ ಸಾಧನೆ ಮಾಡಿದ್ದಾರೆ. ಸರ್ಕಾರ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದರೂ, ಪಾಲಕರು ಆಂಗ್ಲಮಾಧ್ಯಮಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಸರ್ಕಾರಿ ಶಾಲೆಗಳ ವಿದ್ಯಾರ್ಥಿ ಸಂಖ್ಯೆಗೆ ಕಡಿಮೆಯಾತ್ತಿದೆ ಎಂದು ಅಭಿಪ್ರಾಯಪಟ್ಟರು.
ಉತ್ತಮ ಶಿಕ್ಷಣದ ಜತೆಗೆ ಪೂರಕ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಶಾಲೆಗಳ ಬೆಳವಣಿಗೆಗೆ ಶಿಕ್ಷಕರು ಹಾಗೂ ಪಾಲಕರು ಶ್ರಮಿಸಬೇಕು ಎಂದರು.
ಮುಖ್ಯ ಶಿಕ್ಷಕ ಎಚ್. ಮಾರಪ್ಪ, ಸಾಹಿತಿ ನ.ಲ. ವಿಜಯ ವಿಜ್ಞಾನ ಪ್ರದರ್ಶನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದರು. ಸ್ಪರ್ಧೆಯಲ್ಲಿ ಕೆ.ಎ. ಸುಕನ್ಯಾ ಪ್ರಥಮ, ಕೆ.ಎ. ಆರ್ಯ ದ್ವಿತೀಯ, ಎಸ್.ಕೆ. ಶ್ರೇಯ ತೃತೀಯ ಹಾಗೂ ಕೆ.ಕೆ. ರಾಜೇಶ್ವರಿ ನಾಲ್ಕನೇ ಬಹುಮಾನ ಪಡೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net