ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಸಾಧ್ಯ

ಮೇಕೇರಿ ಗೌರಿ ಶಂಕರ ದೇವಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಟ್ಟಗೇರಿ ವಲಯದ ವತಿಯಿಂದ ಆಯೋಜಿಸಿದ ವಿವಿಧ ಕಾರ್ಯಕ್ರಮಗಳನ್ನು ವಿಧಾನಸಭಾ ಮಾಜಿ ಅಧ್ಯಕ್ಷ  ಕೊಂಬಾರನ ಜಿ. ಬೋಪಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು.
ಮೇಕೇರಿ ಗೌರಿ ಶಂಕರ ದೇವಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಟ್ಟಗೇರಿ ವಲಯದ ವತಿಯಿಂದ ಆಯೋಜಿಸಿದ ವಿವಿಧ ಕಾರ್ಯಕ್ರಮಗಳನ್ನು ವಿಧಾನಸಭಾ ಮಾಜಿ ಅಧ್ಯಕ್ಷ ಕೊಂಬಾರನ ಜಿ. ಬೋಪಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು.
Published on
ನಾಪೋಕ್ಲು: ಗ್ರಾಮಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಟ್ಟಗೇರಿ ವಲಯದ ವತಿಯಿಂದ ಮೇಕೇರಿ ಗೌರಿಶಂಕರ ದೇವಾಲಯದಲ್ಲಿ ಆಯೋಜಿಸಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು 1500 ಹೊಸ ಸದಸ್ಯರ ಸೇರ್ಪಡೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸದೃಢ ಸಹಜವಾಗಬೇಕಾದರೆ ಎಲ್ಲರ ಸಹಕಾರ ಅವಶ್ಯಕ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಲಾಗುತ್ತಿರುವ ಜನಪರ ಕಾರ್ಯಕ್ರಮಗಳಿಂದಾಗಿ ಗ್ರಾಮೀಣ ಜನರು ಸದೃಢರಾಗಲು ಸಹಕಾರಿಯಾಗಿದೆ. ಕೊಡಗಿನ ಸಂಪಾಜೆಯಲ್ಲಿ ಪ್ರಾರಂಭಗೊಂಡಾಗ ನಾನೇ ಚಾಲನೆ ನೀಡಿದ್ದೆ. ಅಲ್ಲಿಂದ ಸಂಘಟನೆಯ ಜತೆಗೆ ನನ್ನ ಸಂಪರ್ಕ ನಿರಂತರ ಎಂದು ಮೆಲುಕು ಹಾಕಿದ ಅವರು ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತಾಗಬೇಕೆಂದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೌರಿಶಂಕರ ದೇವಾಲಯದ ಕಾರ್ಯದರ್ಶಿ ಲೋಕೇಶ್ ಟಿ.ವಿ. ವಹಿಸಿದ್ದರು. ಧರ್ಮಸ್ಥಳ ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ಆನಂದ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಬೆಳ್ಯನ ಚಂದ್ರ ಪ್ರಕಾಶ ಶ್ರೀ ಗೌರಿ ಶಂಕರ ದೇವಾಲಯದ ಅಧ್ಯಕ್ಷ ಕೆ.ಕೆ ಪೂರ್ಣಯ್ಯ, ಉಪಾಧ್ಯಕ್ಷ ಕೆ. ಆರ್.ಬೆಳ್ಯಪ್ಪ, ಮೇಕೇರಿ ಗ್ರಾಪಂ ಸದಸ್ಯ ಹನೀಫ್, ಸುಶೀಲಾ, ಪ್ರಗತಿ ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಧನಂಜಯ ಅಗೋಳಿಕಜೆ, ಗಣೇಶ ಸೇವಾ ಸಮಿತಿಯ ಗೌರವಾಧ್ಯಕ್ಷ ಕುಮಾರ್ ಟಿ.ಎ. ಸ್ವಾಗತ್ ಯುವಕ ಸಂಘದ ಅಧ್ಯಕ್ಷ ಉಮೇಶ್ ಟಿ. ಬಂಧು ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷ ನಳಿನಿ ಎನ್, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ಭಾಗವಹಿಸಿದ್ದರು.
ಈ ಸಂದರ್ಭ ವೇದಿಕೆಯಲ್ಲಿದ್ದ ಗಣ್ಯರು ಯೋಜನೆಯ ವಿವಿಧ ಕಾರ್ಯಕ್ರಮಗಳ ಮಂಜೂರಾತಿ ಪತ್ರ ಹಾಗೂ ಸಲಕರಣೆಗಳನ್ನು ಫಲಾನುಭವಿಗಳಿಗೆ ವಿತರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net