ಯುವಜನರಲ್ಲಿ ಹೆಚ್ಚುತ್ತಿರುವ ಮಾದಕದ್ರವ್ಯ ವ್ಯಸನದ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ಡ್ರಗ್ಸ್ ಬಳಕೆ ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದರಲ್ಲದೆ, ಎನ್‌ಡಿಪಿಎಸ್ ಕಾಯ್ದೆಯ ಪ್ರಮುಖ ಅಂಶಗಳನ್ನು ವಿವರಿಸಿ, ಚಿಕ್ಕ ಪ್ರಮಾಣದ ಪ್ರಕರಣಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಲ್ಲಿ, ವ್ಯಾಪಾರಿಕ ಪ್ರಮಾಣದ ಪ್ರಕರಣಗಳಲ್ಲಿ ಕನಿಷ್ಠ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ ಭಾರೀ ದಂಡ ವಿಧಿಸುವ ಅವಕಾಶವಿದೆ ಎಂದು ತಿಳಿಸಿದರು.