ಓಂಕಾರೇಶ್ವರ ದೇವಾಲಯ ಕೊಠಡಿ ಉದ್ಘಾಟನೆ

ಓಂಕಾರೇಶ್ವರ ದೇವಸ್ಥಾನದ ಬಳಿ ನಿರ್ಮಿಸಿರುವ ಕೊಠಡಿಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ಪಿ.ಕಲಾವತಿ, ಚುಮ್ಮಿ ದೇವಯ್ಯ, ಜಿ.ರಾಜೇಂದ್ರ ಇತರರಿದ್ದರು.
ಓಂಕಾರೇಶ್ವರ ದೇವಸ್ಥಾನದ ಬಳಿ ನಿರ್ಮಿಸಿರುವ ಕೊಠಡಿಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ಪಿ.ಕಲಾವತಿ, ಚುಮ್ಮಿ ದೇವಯ್ಯ, ಜಿ.ರಾಜೇಂದ್ರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಓಂಕಾರೇಶ್ವರ ದೇವಾಲಯ ಕೊಠಡಿ ಉದ್ಘಾಟನೆ
ಮಡಿಕೇರಿ: ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿ ರೂ.೩೬.೬೦ ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶೌಚಾಲಯ ಮತ್ತು ಬಟ್ಟೆ ಬದಲಿಸುವ ಕೊಠಡಿಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು, ಓಂಕಾರೇಶ್ವರ ದೇವಾಲಯದ ಭಾಗದಲ್ಲಿ ಹಲವಾರು ವರ್ಷಗಳಿಂದ ಶೌಚಾಲಯ ಹಾಗೂ ಪಾರ್ಕಿಂಗ್ ವ್ಯವಸ್ಥೆ ಬೇಡಿಕೆ ಇತ್ತು. ಈ ಹಿನ್ನೆಲೆ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿ ರೂ.೩೬.೬೦ ಲಕ್ಷ ವೆಚ್ಚದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ ಹಾಗೂ ಬಟ್ಟೆ ಬದಲಿಸುವ ಕೊಠಡಿ ನಿರ್ಮಿಸಲಾಗಿದೆ ಎಂದು ತಿಳಿಸಿದರು.
ದೇವಾಲಯಕ್ಕೆ ಹಲವಾರು ಭಕ್ತಾಧಿಗಳು ಭೇಟಿ ನೀಡುತ್ತಿದ್ದು, ಶೌಚಾಲಯದ ಕೊರತೆ ಇತ್ತು. ಆದ್ದರಿಂದ ದೇವಾಲಯ ಸಮಿತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಕಾರದಲ್ಲಿ ಜಾಗ ನೀಡಿದ್ದು, ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಸರ್ಕಾರಿ ಜಾಗವನ್ನು ದುರುಪಯೋಗ ಪಡಿಸಿಕೊಳ್ಳದೆ ಲಭ್ಯವಾದ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅದರ ಸ್ವಚ್ಛತೆ ಕಾಪಾಡಬೇಕು, ವ್ಯವಸ್ಥಿತ ನೀರು ಸೌಲಭ್ಯವನ್ನು ಒದಗಿಸಬೇಕು. ದೇವಾಲಯದ ಇತಿಹಾಸ ಇದ್ದು, ಅದನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿಗೆ ಅನುದಾನ ಒದಗಿಸಲಾಗುವುದು ಎಂದು ಶಾಸಕರು ತಿಳಿಸಿದರು.
ಇದೇ ಸಂದರ್ಭ ದೇವಾಲಯ ಸಮಿತಿಯಿಂದ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಓಂಕಾರೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ, ಸದಸ್ಯರಾದ ಜಿ.ರಾಜೇಂದ್ರ, ಅಂಬೆಕಲ್ ಕುಶಾಲಪ್ಪ, ಪ್ರಕಾಶ್ ಆಚಾರ್ಯ, ಸಂತೋಷ್ ಭಟ್, ವೀಣಾಕ್ಷಿ, ಕಾರ್ಯನಿರ್ವಹಕ ಅಧಿಕಾರಿ ದೇವರಾಜು, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಎಚ್.ಶಶಿಧರ್, ಸಮಾಲೋಚಕರಾದ ಜತಿನ್ ಬೋಪಣ್ಣ, ಸಹಾಯಕ ಎಂಜಿನಿಯರ್ ಎಸ್.ಮದನ್ ಪ್ರಮುಖರಾದ ಕೆ.ಜಿ.ಪೀಟರ್, ತೆನ್ನಿರಾ ಮೈನಾ, ದಿನೇಶ್, ಮಿನಾಜ್ ಪ್ರವೀಣ್, ಪ್ರೇಮ, ಕವನ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net