ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕೃತ ಕಟ್ಟಡ ಉದ್ಘಾಟನೆ

ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕೃತ ಕಟ್ಟಡವನ್ನು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾ. ಟಿ.ಜಿ. ಶಿವಶಂಕರೇ ಗೌಡ ಉದ್ಘಾಟಿಸಿದರು. ಗೌರಮ್ಮಣಿ, ಹೊಸಮನಿ ಪುಂಡಲಿಕ, ಸಿ.ಟಿ. ಜೋಸೆಫ್ ಮತ್ತಿತರರು ಇದ್ದರು.
ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕೃತ ಕಟ್ಟಡವನ್ನು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾ. ಟಿ.ಜಿ. ಶಿವಶಂಕರೇ ಗೌಡ ಉದ್ಘಾಟಿಸಿದರು. ಗೌರಮ್ಮಣಿ, ಹೊಸಮನಿ ಪುಂಡಲಿಕ, ಸಿ.ಟಿ. ಜೋಸೆಫ್ ಮತ್ತಿತರರು ಇದ್ದರು.
Published on
ಮಡಿಕೇರಿ:
ಗ್ರಾಹಕರು ಮೋಸ, ವಂಚನೆಗೆ ಒಳಗಾಗುವುದು ತಪ್ಪಿಸುವ ಸಲುವಾಗಿ ರಾಜ್ಯಾದ್ಯಂತ ಗ್ರಾಹಕರ ಕಾಯ್ದೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾ. ಟಿ.ಜಿ. ಶಿವಶಂಕರೇ ಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕೃತ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಾಗಿದ್ದು ವಂಚನೆಗೆ ಅಥವಾ ಮೋಸಕ್ಕೆ ತುತ್ತಾದರೆ ಪರಿಹಾರ ಒದಗಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಕ್ರಮವಹಿಸಲಿದೆ. ಗ್ರಾಹಕರಿಗೆ ಸರಿಯಾದ ಸೇವೆ ಒದಗಿಸಬೇಕು ಎಂಬುದು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಕಚೇರಿಗೆ ಬೇಕಾದ ಎಲ್ಲಾ ರೀತಿಯ ಮೂಲ ಸೌಲಭ್ಯವನ್ನು ಕಲ್ಪಿಸಲು ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮುಂದಾಗಿದೆ. ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಕೆಯಾಗುವ ಪ್ರಕರಣಗಳನ್ನು 90 ದಿನಗಳಲ್ಲಿ ವಿಲೇವಾರಿ ಮಾಡಲು ಆಯೋಗ ಶ್ರಮಿಸುತ್ತಿದೆ. ಗ್ರಾಹಕರ ವ್ಯಾಜ್ಯಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ತೀರ್ಪು ನೀಡಲು ಆಯೊಗ ಕ್ರಮವಹಿಸಿದೆ.
ಗ್ರಾಹಕರ ಹಿತರಕ್ಷಣಾ ಕಾಯ್ದೆ ಬಗ್ಗೆ ವಕೀಲರಿಗೆ ಮಾಹಿತಿ ನೀಡಿ ರಾಜ್ಯಾದ್ಯಾಂತ ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಗ್ರಾಹಕರ ಆಯೋಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಲಾಗುತ್ತಿದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ನ್ಯಾಯಾಲಯಗಳ ಹಾಗೂ ವಕೀಲರ ಸಂಘದ ಸಹಕಾರ ಅತ್ಯಗತ್ಯ.
ನ್ಯಾಯಾಂಗವು ಗ್ರಾಹಕರ ಆಯೋಗದ ಜತೆ ಕೈಜೋಡಿಸಿ ಕೆಲಸ ಮಾಡಬೇಕು ಎಂಬುದಾಗಿದೆ. ಆ ನಿಟ್ಟಿನಲ್ಲಿ ಗ್ರಾಹಕರ ಹಿತರಕ್ಷಣೆ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು. ಗ್ರಾಹಕರ ಹಿತರಕ್ಷಣಾ ಸಮಿತಿ ಸಭೆಯನ್ನು ಮೂರು ತಿಂಗಳಿಗೊಮ್ಮೆ ನಡೆಸಿ ಗ್ರಾಹಕರ ಹಕ್ಕುಗಳ ಕಾಯ್ದೆಯನ್ನು ಸಂರಕ್ಷಿಸುವಲ್ಲಿ ಮುಂದಾಗಬೇಕು. ಗ್ರಾಹಕರಿಗೆ ಮಧ್ಯಸ್ಥಿಕೆ ಮೂಲಕ ಪರಿಹಾರ ಕಂಡುಕೊಳ್ಳುವುದು, ಹಾಗೆಯೇ ಗ್ರಾಹಕರ ಹಿತರಕ್ಷಣೆ ಮತ್ತು ಚಿಂತನೆಯನ್ನು ಅರ್ಥ ಮಾಡಿಕೊಂಡು ಆಯೋಗ ಕಾರ್ಯನಿರ್ವಹಿಸುತ್ತಿದೆ.
ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ 18 ಕೋಟಿ ರೂ. ಇದ್ದು, ಇದರಲ್ಲಿ 5 ಕೋಟಿ ರೂ. ವಿವಿಧ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಜಾಗೃತಿ ಅಭಿಯಾನಕ್ಕೆ ಬಳಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಕೊಡಗು ಜಿಲ್ಲೆಯ ನ್ಯಾಯಾಧೀಶರು, ನ್ಯಾಯವಾದಿಗಳು ಸೇರಿದಂತೆ ಹಲವರು ಶ್ರಮಿಸಿದ್ದಾರೆ ಎಂದರು.
ಗ್ರಾಹಕರ ಪರಿಹಾರ ವೇದಿಕೆಯ ಸದಸ್ಯೆ ಗೌರಮ್ಮಣಿ ಮಾತನಾಡಿ ಗ್ರಾಹಕರ ಆಯೋಗವು ಗ್ರಾಹಕರ ಹಿತರಕ್ಷಣೆಗಾಗಿ ಕೆಲಸ ಮಾಡುತ್ತಿದ್ದು, ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಶ್ರಮಿಸುತ್ತಿದೆ. ಗ್ರಾಹಕರಿಗೆ ನ್ಯಾಯ ಒದಗಿಸುವಲ್ಲಿ ಮುಂದಾಗಲಾಗಿದೆ ಎಂದು ಹೇಳಿದರು.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಹೊಸಮನಿ ಪುಂಡಲಿಕ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಡಾ. ಸಿ.ರೇಣುಕಾಂಬ ಮಾತನಾಡಿದರು.
ಆಹಾರ ಇಲಾಖೆ ಉಪ ನಿರ್ದೇಶಕ ಎಂ. ಭೀಮರಾಯ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಕೆ.ಟಿ.ಪ್ರಭು, ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಬಾಬು, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಬಿ.ಎಸ್. ಜಯಪ್ಪ, ಮಹಾಲಿಂಗಸ್ವಾಮಿ, ನ್ಯಾಯಾಧೀಶರು, ನ್ಯಾಯಾವಾದಿಗಳು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net