ಸಿದ್ದಾಪುರದಲ್ಲಿ ಹೆಚ್ಚಿದ ಕಾಡಾನೆ ಹಾವಳಿ

ಸಿದ್ದಾಪುರದ ಸಮೀಪದ ಪಳ್ಳಕೆರೆಯಲ್ಲಿ ಕಾಡಾನೆಗಳು ಕಾವೇರಿ ನದಿ ದಾಟಿ ಬಂದಿರುವುದು.
ಸಿದ್ದಾಪುರದ ಸಮೀಪದ ಪಳ್ಳಕೆರೆಯಲ್ಲಿ ಕಾಡಾನೆಗಳು ಕಾವೇರಿ ನದಿ ದಾಟಿ ಬಂದಿರುವುದು.
Published on
ಸಿದ್ದಾಪುರ: ಸಮೀಪದ ಪಳ್ಳಕೆರೆ ವ್ಯಾಪ್ತಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದ್ದು, ಕಾಫಿ ತೋಟಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಅರೆಕಾಡು ವ್ಯಾಪ್ತಿಯಿಂದ ಮತ್ತೆರಡು ಕಾಡಾನೆಗಳು ಕಾವೇರಿ ನದಿ ದಾಟಿ ಬಂದಿರುವುದು ಸಾರ್ವಜನಿಕರ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.
ಕಳೆದ ಕೆಲ ದಿನಗಳಿಂದ ಈ ಭಾಗದ ಕಾಫಿ ತೋಟಗಳಲ್ಲಿ 25ಕ್ಕೂ ಅಧಿಕ ಕಾಡಾನೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರು ಆನೆಗಳ ಸಂಚಾರದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ನಿರಂತರವಾಗಿ ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಕಾರ್ಮಿಕರು ಆತಂಕದ ವಾತಾವರಣದಲ್ಲಿ ದಿನ ಕಳೆಯುವಂತಾಗಿದೆ.
ಕಾಡಾನೆಗಳ ಸಂಚಾರ ಕುರಿತು ಮಾಹಿತಿ ಇದ್ದರೂ ಅರಣ್ಯ ಇಲಾಖೆ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಮರಳಿಸುವ ಕ್ರಮ ಕೈಗೊಳ್ಳಬೇಕು ಹಾಗೂ ಕಾರ್ಮಿಕರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net