ಮಕ್ಕಳಲ್ಲಿ ಸನಾತನ ಧರ್ಮದ ಮೌಲ್ಯಗಳನ್ನು ಬೆಳೆಸಿ

ಸೋಮವಾರಪೇಟೆ ತಾಲೂಕಿನ ಅಬ್ಬೂರುಕಟ್ಟೆ ಗ್ರಾಮದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಕೇಶವಮೂರ್ತಿ, ಪ್ರಕಾಶ್, ಪಾಪಯ್ಯ, ರೂಪಾ ಇದ್ದರು.
ಸೋಮವಾರಪೇಟೆ ತಾಲೂಕಿನ ಅಬ್ಬೂರುಕಟ್ಟೆ ಗ್ರಾಮದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಕೇಶವಮೂರ್ತಿ, ಪ್ರಕಾಶ್, ಪಾಪಯ್ಯ, ರೂಪಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ದೋ. ಕೇಶವಮೂರ್ತಿ ಹೇಳಿಕೆ
ಸೋಮವಾರಪೇಟೆ: ಮಕ್ಕಳಲ್ಲಿ ದೇಶಪ್ರೇಮ, ಶಿಸ್ತು ಮತ್ತು ಸನಾತನ ಧರ್ಮದ ಮೌಲ್ಯಗಳನ್ನು ಬೆಳೆಸುವುದು ಮುಖ್ಯ ಎಂದು ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ದೋ. ಕೇಶವಮೂರ್ತಿ ಹೇಳಿದರು.
ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ಅಬ್ಬೂರು ಕಟ್ಟೆ ಮಂಡಲದಲ್ಲಿ ಇತ್ತೀಚೆಗೆ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹನೀಯರ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಬಿತ್ತಬೇಕು ಎಂದು ಕರೆ ನೀಡಿದರು. ಹನುಮಾನ್, ಶ್ರೀರಾಮಚಂದ್ರ, ಭಗತ್ ಸಿಂಗ್, ಸುಖದೇವ್ , ಚಂದ್ರಶೇಖರ ಆಜಾದ್ ಅವರಂತಹ ದೇಶಭಕ್ತರನ್ನು ಮಕ್ಕಳಿಗೆ ಆದರ್ಶವಾಗಿ ತೋರಿಸಬೇಕು ಎಂದು ಅಭಿಪ್ರಾಯಪಟ್ಟರು.
ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಮಾತನಾಡಿ, ಭಾರತ ಧಾರ್ಮಿಕ ಇತಿಹಾಸ ಹೊಂದಿದ ಪುಣ್ಯಭೂಮಿ. ಋಷಿಮುನಿಗಳು, ಯೋಗಿಗಳು ಹಾಗೂ ತ್ಯಾಗಿಗಳ ತಪಸ್ಸಿನಿಂದ ಈ ಭೂಮಿ ಪವಿತ್ರವಾಗಿದೆ. ಉತ್ತರ ಪ್ರದೇಶದಲ್ಲಿ ನಡೆದ ಕುಂಭಮೇಳ ಇದಕ್ಕೆ ಸಾಕ್ಷಿಯಾಗಿದೆ ಎಂದರು.ಹಿಂದೂಗಳು ಒಗ್ಗಟ್ಟಿನಿಂದ ಇದ್ದರೆ ಮಾತ್ರ ಸಂಸ್ಕೃತಿ ಉಳಿಯಲಿದೆ ಎಂದು ಹೇಳಿದರು.
ತಣ್ಣೀರುಹಳ್ಳ ಬಸವೇಶ್ವರ ದೇವಾಲಯದಿಂದ ಅಬ್ಬೂರು ಕಟ್ಟೆ ಜಂಕ್ಷನ್‌ವರೆಗೆ ಭವ್ಯ ಶೋಭಾಯಾತ್ರೆ ನಡೆಯಿತು. ಚಂಡೆ ವಾದ್ಯ, ಮಕ್ಕಳ ನೃತ್ಯಗಳೊಂದಿಗೆ ನೂರಾರು ಮಂದಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ಹಿಂದೂ ಸಂಗಮ ಸಮಿತಿ ಅಧ್ಯಕ್ಷ ಪಿ.ಡಿ. ಪ್ರಕಾಶ್, ಕೆ.ಎನ್.ಪಾಪಯ್ಯ ಪಿ.ಇ. ಚಂದ್ರಾಜು, ರೂಪಾ ಸತೀಶ್, ಕಾವೇರಿ ಹೊಸಳ್ಳಿ ಹಾಗೂ ರಮೇಶ್ ಜೆ. ಜೆ. ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net