ರಸಗೊಬ್ಬರ ಸಮರ್ಪಕ ಪೂರೈಕೆಗೆ ಸೂಚನೆ

ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಸಗೊಬ್ಬರ ಸಮಿತಿ ಸಭೆಯಲ್ಲಿ ರಸಗೊಬ್ಬರ ಕಂಪನಿ ಸರಬರಾಜುದಾರರು ಹಾಗೂ ರಸಗೊಬ್ಬರ ಮಾರಾಟಗಾರರು, ವಿತರಕರು ಇತರರು ಇದ್ದರು.
ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಸಗೊಬ್ಬರ ಸಮಿತಿ ಸಭೆಯಲ್ಲಿ ರಸಗೊಬ್ಬರ ಕಂಪನಿ ಸರಬರಾಜುದಾರರು ಹಾಗೂ ರಸಗೊಬ್ಬರ ಮಾರಾಟಗಾರರು, ವಿತರಕರು ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಸಗೊಬ್ಬರ ಸಮರ್ಪಕ ಪೂರೈಕೆಗೆ ಸೂಚನೆ
ಮಡಿಕೇರಿ: ಜೂನ್ ತಿಂಗಳಿನಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ರೈತರ ಬೇಡಿಕೆಗೆ ತಕ್ಕಂತೆ ರಸಗೊಬ್ಬರ ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು.
ರಸಗೊಬ್ಬರ ಪೂರೈಕೆದಾರರು ಹಾಗೂ ವಿತರಕರೊಂದಿಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಸಗೊಬ್ಬರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ ಮತ್ತು ಎಂಒಪಿ ರಸಗೊಬ್ಬರಕ್ಕೆ ಬೇಡಿಕೆ ಇದೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ದಾಸ್ತಾನು ಮಾಡಿಕೊಳ್ಳಬೇಕು. ಜೊತೆಗೆ ಮಣ್ಣು ಆರೋಗ್ಯ ನೋಡಿಕೊಂಡು ರಸಗೊಬ್ಬರ ಬಳಸುವಂತಾಗಲು ರೈತರಿಗೆ ಮನವರಿಕೆ ಮಾಡುವಂತಾಗಬೇಕು ಹಾಗೂ ಅಧಿಕಾರಿಗಳು, ಮಾರಾಟಗಾರರು ಮತ್ತು ವಿತರಕರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಕೃಷಿ, ತೋಟಗಾರಿಕೆ, ಕಾಫಿ ಮಂಡಳಿ, ಸಾಂಬಾರ ಮಂಡಳಿಯವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೃಷಿಕರು ಯಾವ ಯಾವ ರೀತಿಯ ರಸಗೊಬ್ಬರ ಬಳಸಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಎಸ್.ಚಂದ್ರಶೇಖರ್ ಪ್ರಸಕ್ತ ಸಾಲಿನಲ್ಲಿ ಯೂರಿಯಾ, ಡಿಎಪಿ, ಎಂಒಪಿ, ಎನ್‌ಪಿಕೆ, ಕಾಂಪ್ಲೆಕ್ಸ್, ಎಸ್‌ಪಿ ರಸಗೊಬ್ಬರ ದಾಸ್ತಾನು ಬಗ್ಗೆ ಮಾಹಿತಿ ನೀಡಿ, ಕೃಷಿಕರಿಗೆ ನಕಲಿ ಹಾಗೂ ಅಸಲಿ ರಸಗೊಬ್ಬರದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಮಾರಾಟಗಾರರು, ವಿತರಕರು ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಮುಂಗಾರು ಶೀಘ್ರ ಆರಂಭವಾಗುವುದರಿಂದ ಯೂರಿಯಾಗೆ ಬೇಡಿಕೆ ಇದೆ. ರಸಗೊಬ್ಬರ ಪೂರೈಕೆದಾರರು ಮತ್ತು ಮಾರಾಟಗಾರರು ಸಭೆಯಲ್ಲಿ ಹಲವು ಸಲಹೆ ನೀಡಿದರು.
ಕೃಷಿ ಇಲಾಖೆ ಉಪ ನಿರ್ದೇಶಕ ಡಾ.ಡಿ.ಎಸ್.ಸೋಮಶೇಖರ್, ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕ(ಜಾರಿ ದಳ) ಪರಮೇಶ್, ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕ ಕೆ.ಪಿ.ವೀರಣ್ಣ, ಮಡಿಕೇರಿ ತಾಂತ್ರಿಕ ಅಧಿಕಾರಿ ಎಂ.ವಿ.ವರದರಾಜು, ರಸಗೊಬ್ಬರ ಕಂಪನಿ ಸರಬರಾಜುದಾರರು ಹಾಗೂ ರಸಗೊಬ್ಬರ ಮಾರಾಟಗಾರರು, ವಿತರಕರು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net