ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ ಮಾತನಾಡಿ, ಜಿಲ್ಲೆಯಲ್ಲಿ ಕೃಷಿಕರಿಗೆ ದನದ ಕೊಟ್ಟಿಗೆ, ಹಂದಿ ಶೆಡ್, ಕೋಳಿ ಶೆಡ್ ಮತ್ತು ವಿವಿಧ ವೈಯಕ್ತಿಕ ಹಾಗೂ ಸಮುದಾಯಾಧಾರಿತ ಕಾಮಗಾರಿ ಒಳಗೊಂಡಂತೆ ೩೧೮ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಈಗಾಗಲೇ ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಹಮ್ಮಿಕೊಂಡಿದ್ದು, ಗ್ರಾಮೀಣ ಜನರು ಇದರ ಸದುಪಯೋಗ ಪಡೆಯಲು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ತಾಕೀತು ಮಾಡಿದರು.