ವಿದ್ಯುತ್ ಲೈನ್‌ಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ

ಕುಶಾಲನಗರ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ನಡೆಯಿತು. ಪರಮೇಶ್ವರಪ್ಪ, ಕೆ.ಸಿ. ಶಶಿ ಭೀಮಯ್ಯ, ಬಿ.ಡಿ. ಅಣ್ಣಯ್ಯ, ಮುಸ್ತಫ ಇದ್ದರು.
ಕುಶಾಲನಗರ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ನಡೆಯಿತು. ಪರಮೇಶ್ವರಪ್ಪ, ಕೆ.ಸಿ. ಶಶಿ ಭೀಮಯ್ಯ, ಬಿ.ಡಿ. ಅಣ್ಣಯ್ಯ, ಮುಸ್ತಫ ಇದ್ದರು.
Published on
ಕುಶಾಲನಗರ:
ಕಟ್ಟಡಗಳ ಮೇಲ್ಗಡೆ ಹಾದು ಹೋಗಿರುವ ವಿದ್ಯುತ್ ಲೈನ್‌ಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಕುಶಾಲನಗರ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯೋಜನೆಯ ಅನುಷ್ಠಾನ ವರದಿ ಬಗ್ಗೆ ಸಮಗ್ರ ಚರ್ಚೆ ನಡೆದ ಸಂದರ್ಭ ಸೆಸ್ಕ್ ವಿಷಯ ಪ್ರಸ್ತಾಪಿಸಿದÀ ಸಮಿತಿ ಸದಸ್ಯ ರಫೀಕ್ ಖಾನ್ ಸುಂಟಿಕೊಪ್ಪ ಪಟ್ಟಣದ ಮುಖ್ಯ ರಸ್ತೆಯ ಬದಿಯಲ್ಲಿ ಕಟ್ಟಡದ ಮೇಲೆ ವಿದ್ಯುತ್ ತಂತಿಗಳು ಹಾದು ಹೋಗಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳ ಗಮನಕ್ಕೆ ತಂದ ಸಂದರ್ಭ ಮಾತನಾಡಿದ ಶಶಿಧರ್ ಕುಶಾಲನಗರ ಸಮೀಪ ಗುಮ್ಮನಕೊಲ್ಲಿ ಬಳಿ ಇತ್ತೀಚೆಗೆ 11 ಕೆ ವಿ ವಿದ್ಯುತ್ ಲೈನ್ ತಗಲಿ ಬಾಲಕಿ ಸುಟ್ಟು ಅಸ್ವಸ್ಥಳಾಗಿರುವ ಘಟನೆಗೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದರು. ಜಿಲ್ಲಾ ಅನುಷ್ಠಾನ ಸಮಿತಿಯ ಸದಸ್ಯ ಬಿ.ಡಿ. ಅಣ್ಣಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹಿಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ತಂತಿ ಸ್ಥಳಾಂತರಿಸಲು ತಿಳಿಸಿದರೂ ಸಂಬAಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದು ಮತ್ತು ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹೆಬ್ಬಾಲೆ ವ್ಯಾಪ್ತಿಯಲ್ಲಿ ಸೆಸ್ಕ್ ಉಪವಿಭಾಗ ಕಚೇರಿ ತೆರೆಯಲು ಅನುಷ್ಠಾನ ಸಮಿತಿ ಅಧ್ಯಕ್ಷರು ಸಭೆಯಲ್ಲಿ ಪ್ರಸ್ತಾವನೆ ಬಗ್ಗೆ ಅಧಿಕಾರಿಗಳ ಸಲಹೆ ಪಡೆದರು. ಗ್ರಾಮೀಣ ವ್ಯಾಪ್ತಿಯ ರೈತರಿಗೆ ಈ ಮೂಲಕ ಹೆಚ್ಚಿನ ಸಹಕಾರವಾಗಲಿದೆ ಎಂದು ಹೇಳಿದ ವಿ.ಪಿ. ಶಶಿಧರ್ ಅಧಿಕಾರಿಗಳೊಂದಿಗೆ ಹಿರಿಯ ಅಧಿಕಾರಿಗಳಿಗೆ ಸಮಗ್ರ ವಿವರದೊಂದಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಇದರೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆ ಕೊಡಬೇಕು ಎಂದರು.
ಪಡಿತರ ಚೀಟಿ ಮತ್ತು ಅಂಗನವಾಡಿಗಳ ಸಮಸ್ಯೆ, ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಮತ್ತು ಪಾವತಿಯಾದ ಅನುದಾನದ ಮಾಹಿತಿ ಬಗ್ಗೆ ಚರ್ಚೆ ನಡೆಯಿತು. ಕುಶಾಲನಗರ ಕೆ.ಎಸ್.ಆರ್.ಟಿ.ಸಿ. ಘಟಕ ಕಾಮಗಾರಿ ಬಗ್ಗೆ ಅಧ್ಯಕ್ಷರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಘಟಕ ಪ್ರಾರಂಭವಾದ ಸಂದರ್ಭ ಗ್ರಾಮಾಂತರ ಪ್ರದೇಶಗಳಿಗೆ ಹೆಚ್ಚುವರಿ ಬಸ್ ರೂಟ್ ಗಳನ್ನು ಕಲ್ಪಿಸುವ ಬಗ್ಗೆ ಚರ್ಚೆ ನಡೆಯಿತು. ಸುಂಟಿಕೊಪ್ಪದಿAದ ಕುಶಾಲನಗರ ಪ್ರಯಾಣಿಕರಿಗೆ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸುವುದು ಹಾಗೂ ಶಿರಂಗಾಲದಿAದ ಕುಶಾಲನಗರಕ್ಕೆ ಹೆಚ್ಚಿನ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ತಾಲೂಕು ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಶಶಿ ಭೀಮಯ್ಯ, ಮುಸ್ತಫ
ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣೇಗೌಡ, ಎಸ್. ವಿವೇಕಾನಂದ, ಶ್ರೀನಿವಾಸ್ ಕುಮಾರ್, ಯು.ಎಂ. ಕಿಶೋರ್, ಫಿಲೋಮಿನಾ, ಎಸ್.ಎ. ಶ್ರೀನಿವಾಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net