ಎಸ್ಸೆಸ್ಸೆಲ್ಸಿ ಪರೀಕ್ಷಾ ಜಿಲ್ಲಾ ನೋಡಲ್ ಅಧಿಕಾರಿ ಬಿಂದು ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಅಗತ್ಯ ಪೀಠೋಪಕರಣ, ಇಂಟರ್‌ನೆಟ್ ಸಂಪರ್ಕ ಸಹಿತ ಸಿಸಿಟಿವಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಪರೀಕ್ಷಾ ಕೊಠಡಿಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ, ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಸೌಲಭ್ಯ ಹೀಗೆ ಹಲವು ಮೂಲ ಸೌಕರ್ಯ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸಾರಿಗೆ ಜಾಗೃತ ದಳ, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು