ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ

ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ವಾಹನ ಜಾಥಾ ನಡೆಸಲಾಯಿತು.
ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ವಾಹನ ಜಾಥಾ ನಡೆಸಲಾಯಿತು.
Published on
ಕುಶಾಲನಗರ:
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಗುರುವಾರ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು, ಆಟೋ ಚಾಲಕರು ಸೇರಿದಂತೆ ಗ್ರಾಮಸ್ಥರ ಸಹಕಾರದೊಂದಿಗೆ ಮಾದಕ ದ್ರವ್ಯ ವಿರೋಧಿ ಜಾಥಾ ನಡೆಸಲಾಯಿತು.
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ರಾಮಚಂದ್ರ ಜಾಥಾಕ್ಕೆ ಚಾಲನೆ ನೀಡಿದರು. ನಂತರ ಮಾತಾನಾಡಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮದಿಂದಾಗುವ ಅನಾಹುತಗಳು ತಮ್ಮ ಬದುಕನ್ನು ಹಾಳುಮಾಡುವುದರ ಜತೆಯಲ್ಲಿ ಜೀವವನ್ನೇ ತೆಗೆಯುತ್ತದೆ. ಯುವಕರು ಮಾದಕ ದ್ರವ್ಯಗಳ ಸೇವನೆಯ ದುಷ್ಚಟಗಳಿಂದ ದೂರವಿರಬೇಕಾಗಿದೆ. ಅಂತಹ ಪ್ರಸಂಗದ ಸುದ್ದಿ ತಿಳಿದ ತಕ್ಷಣವೇ ಪೊಲೀಸ್ ಸಹಾಯವಾನಿ ಅಥವಾ ಠಾಣೆಯ ವ್ಯಾಪ್ತಿಯ ಗ್ರಾಮಾಂತರ ಗಸ್ತು ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಠಾಣೆಯ ಅಪರಾಧ ವಿಭಾಗದ ಠಾಣಾಧಿಕಾರಿ ಸ್ವಾಮಿ, ಸಿಬ್ಬಂದಿ ವರ್ಗ, ಕೂಡಿಗೆ, ಕೂಡುಮಂಗಳೂರು ಸರ್ಕಲ್ ನ ಆಟೋ ಮಾಲೀಕರು ಮತ್ತು ಚಾಲಕರು, ಸಾರ್ವಜನಿಕರು ಇದ್ದರು.
ನಂತರ ಪೊಲೀಸ್ ಸಿಬ್ಬಂದಿ ಸೇರಿದಂತೆ ಎರಡೂ ಕಡೆಯ ಹಲವು ಆಟೋ ಚಾಲಕರು, ಮಾಲೀಕರು, ಸಾರ್ವಜನಿಕರು ತಮ್ಮ ತಮ್ಮ ವಾಹನಗಳ ಮೂಲಕ ಕೂಡಿಗೆ ಸರ್ಕಲ್‌ನಿಂದ ಹಾಸನ ಹೆದ್ದಾರಿ ಮೂಲಕ ಕೈಗಾರಿಕಾ ವೃತ್ತದವರೆಗೆ ಸಾಗಿ ಸಾರ್ವಜನಿಕವಾಗಿ ಅರಿವು ಮೂಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net