ಮಹಿಳೆಯರಿಗೆ ಸಂಪೂರ್ಣ ಸ್ವಾತಂತ್ರೃ ನೀಡಲು ಸಾಧ್ಯವಾಗಿಲ್ಲ

ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿಯಲ್ಲಿ ಮಂಗಳವಾರ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಮಾತನಾಡಿದರು. ಯೋಗೇಂದ್ರ, ಜಯಕುಮಾರ್, ಜಯೇಂದ್ರ ಇದ್ದರು.
ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿಯಲ್ಲಿ ಮಂಗಳವಾರ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಮಾತನಾಡಿದರು. ಯೋಗೇಂದ್ರ, ಜಯಕುಮಾರ್, ಜಯೇಂದ್ರ ಇದ್ದರು.
Published on
ಸೋಮವಾರಪೇಟೆ: ತಾಲೂಕಿನ ಬೆಟ್ಟದಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಮತ್ತು ಮಾನವತಾ ಯುವಕ ಸಂಘದ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಸಿದ್ಧಾರ್ಥನಗರದ ಅಂಬೇಡ್ಕರ್ ಮೈದಾನದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿ ಮಾತನಾಡಿ, ಡಾ.ಅಂಬೇಡ್ಕರ್ ಅವರು ಚಿಕ್ಕಂದಿನಿಂದಲೇ ಶೋಷಿತರ ಪರವಾಗಿ ಹೋರಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ ಇಷ್ಟು ವರ್ಷಗಳು ಕಳೆದರೂ, ಇಂದಿಗೂ ನಮ್ಮ ಮನೆಗಳಲ್ಲೂ ಮಹಿಳೆಯರಿಗೆ ಪೂರ್ಣ ಪ್ರಮಾಣದ ಸ್ವಾತಂತ್ರ್ಯ ನೀಡಲು ಸಾಧ್ಯವಾಗಿಲ್ಲ. ಶಿಕ್ಷಣ ನೀಡಿದ ನಂತರ ಉದ್ಯೋಗ ಮಾಡಲು ಬಿಡದೆ, ಮದುವೆ ಮಾಡಿ ತಮ್ಮ ಜವಾಬ್ದಾರಿಯನ್ನು ಕಳೆದುಕೊಳ್ಳುತ್ತಾರೆ. ಎಲ್ಲರೂ ಸಮಾನರು, ಎಲ್ಲರಿಗೂ ಸಮಾನ ಹಕ್ಕುಗಳಿವೆ ಎಂದು ಅಂಬೇಡ್ಕರ್ ತಿಳಿಸಿದರೂ ಅದನ್ನು ಪೂರ್ಣ ಪ್ರಮಾಣದಲ್ಲಿ ಸಮಾಜದಲ್ಲಿ ಆಚರಣೆಗ ತರಲು ನಾವು ವಿಫಲರಾಗಿದ್ದೇವೆ ಎಂದು ಅಭಿಪ್ರಾಯಿಸಿದರು.
ಸಮಿತಿ ಅಧ್ಯಕ್ಷ ಯೋಗೇಂದ್ರ, ಶಿಕ್ಷಕ ಜಯಕುಮಾರ್, ಪ್ರಮುಖರಾದ ಬಿ.ಈ.ಜಯೇಂದ್ರ, ಎ.ಎಲ್.ಜನಾರ್ದನ, ಎಂ.ಎಸ್. ವೀರೆಂದ್ರ, ರೇಷ್ಮಾ, ಎಚ್.ಎಸ್.ಚಂದ್ರಶೇಖರ್, ಬಿ.ಆರ್.ಜಗದೀಶ್ ಹಾಗೂ ಕೆ.ಪಿ.ರವಿ ಇದ್ದರು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಗಂಧರ್ವ ಕಲಾ ತಂಡ, ಕೊಡ್ಲಿಪೇಟೆ ಮಾನವತಾ ಕಲಾ ತಂಡ ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ಕ್ರೀಡಾ ಸ್ಪರ್ಧೆಗಳು, ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಕುರಿತು ಪ್ರಬಂಧ ಸ್ಪರ್ಧೆ ನಡೆಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ 2024-25ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಹಾಗೂ ಕ್ರೀಡಾ ಸಾಧಕರಿಗೆ ಅಭಿನಂದಿಸಲಾಯಿತು. ಕೊನೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net