ಬಾಲ್ಯವಿವಾಹ ಕುರಿತು ಅರಿವು ಮೂಡಿಸುವುದು ಅಗತ್ಯ

ಬಾಲ್ಯವಿವಾಹ ಕುರಿತು ನಡೆದ ಅರಿವು ಕಾರ್ಯಕ್ರಮದಲ್ಲಿ ಸವಿತಾ ಕೀರ್ತನ್, ಬಾಲಚಂದ್ರ ನಾಯರ್, ಎಸ್.ಆರ್.ಕೇಶಿನಿ, ಪುಂಡರೀಕ ಇತರರಿದ್ದರು.
ಬಾಲ್ಯವಿವಾಹ ಕುರಿತು ನಡೆದ ಅರಿವು ಕಾರ್ಯಕ್ರಮದಲ್ಲಿ ಸವಿತಾ ಕೀರ್ತನ್, ಬಾಲಚಂದ್ರ ನಾಯರ್, ಎಸ್.ಆರ್.ಕೇಶಿನಿ, ಪುಂಡರೀಕ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಾಲ್ಯವಿವಾಹ ಕುರಿತು ಅರಿವು ಮೂಡಿಸುವುದು ಅಗತ್ಯ
  • ಬಾಲ್ಯವಿವಾಹ ಕುರಿತು ನಡೆದ ಅರಿವು ಕಾರ್ಯಕ್ರಮದಲ್ಲಿ ಬಾಲಚಂದ್ರ ನಾಯರ್
ಮಡಿಕೇರಿ: ಪೋಷಕರಿಗೆ ಮತ್ತು ಮಕ್ಕಳಿಗೆ ಬಾಲ್ಯವಿವಾಹ ಕುರಿತು ಅರಿವು ಮೂಡಿಸುವುದು ಅಗತ್ಯ ಎಂದು ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಚಂದ್ರ ನಾಯರ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಕರಿಕೆ ಗ್ರಾಮ ಪಂಚಾಯಿತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಿಕೆ ಇವರ ಸಹಯೋಗದೊಂದಿಗೆ ಕರಿಕೆ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಕಿಶೋರಿಯರಿಗೆ ಹಾಗೂ ೬ ವರ್ಷದೊಳಗಿನ ಮಕ್ಕಳ ತಾಯಂದಿರು ಮತ್ತು ಸ್ತ್ರೀ ಶಕ್ತಿ ಸದಸ್ಯರಿಗೆ ಬಾಲ್ಯವಿವಾಹ ಕುರಿತು ನಡೆದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರಿಕೆ ಗ್ರಾಮ ಬಾಲ್ಯವಿವಾಹ ಮುಕ್ತ ಗ್ರಾಮವಾಗಿದೆ. ಬಾಲಗರ್ಭಿಣಿಯಂತಹ ತೊಂದರೆಗಳು ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಗದಿರುವಂತೆ ತಡೆಯಲು ಪೋಷಕರಿಗೆ ಮತ್ತು ಮಕ್ಕಳಿಗೆ ಅರಿವು ಕಾರ್ಯಕ್ರಮಗಳನ್ನು ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಎಲ್ಲರೂ ಒಟ್ಟುಗೂಡಿ ನಡೆಸಬೇಕು. ಬಾಲ್ಯವಿವಾಹ ಸಮಸ್ಯೆ ಬರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ರಾಜ್ಯಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಸೌಲಭ್ಯಗಳನ್ನು ತಂದಿದೆ. ಅದನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದ ಅವರು, ಪಂಚ ಗ್ಯಾರಂಟಿ ಯೋಜನೆಗಳ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು.
ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಇಂದು ಮಕ್ಕಳು ಮತ್ತು ಮಹಿಳೆಯರಿಗೆ ಸರ್ಕಾರ ಬೇಟಿ ಬಚಾವೋ ಬೇಟಿ ಪಡವೋ ಎಂಬ ಉತ್ತಮ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಕೊಡಗಿನಲ್ಲಿ ಗಂಡು-ಹೆಣ್ಣು ಎಂಬ ಭೇದ ಭಾವವಿಲ್ಲದೆ ಸಮಾನತೆಯಿಂದ ಮಕ್ಕಳನ್ನು ಬೆಳೆಸುತ್ತಿದೆ. ಇಬ್ಬರಲ್ಲೂ ಸಮಾನ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಿದ್ದು, ಇದರ ಸದ್ಬಳಕೆಯನ್ನು ಮಾಡಿಕೊಂಡು ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯುವಂತಗಬೇಕು. ವಯಸ್ಸಿನ ಆಕರ್ಷಣೆಗೆ ಒಳಗಾಗದೆ ಕೆಟ್ಟ ಆಮಿಷಗಳಿಗೆ ಒಳಗಾಗಬಾರದು ಎಂದು ಸಲಹೆ ನೀಡಿದರು.
ಮಕ್ಕಳಿಗೆ ದಿನಪತ್ರಿಕೆಗಳನ್ನು ಪ್ರತಿದಿನ ಓದುವ ಹವ್ಯಾಸಗಳನ್ನು ಬೆಳೆಸಬೇಕು. ಮೊಬೈಲ್ ಬಳಕೆಯಿಂದ ಯಾವುದೇ ಉತ್ಪ್ರೇಕ್ಷೆಗೆ ಒಳಗಾಗದೆ ಓದುವ ವಯಸ್ಸಿನಲ್ಲಿ ಶಿಕ್ಷಣದಿಂದ ವಂಚಿತರಾಗಿ ತಮ್ಮ ಬಾಲ್ಯ ಮತ್ತು ಶಿಕ್ಷಣವನ್ನು ಹಾಳು ಮಾಡಿಕೊಳ್ಳಬಾರದು. ಸಮಯ ಮತ್ತು ಶಿಕ್ಷಣ ಅತೀ ಅವಶ್ಯಕವಾಗಿದ್ದು, ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಪುಂಡರೀಕ ಮಾತನಾಡಿ, ೧೧-೧೮ ವರ್ಷದ ಹೆಣ್ಣು ಮಕ್ಕಳಿಗೆ ದೈಹಿಕ, ಭೌತಿಕ, ಮಾನಸಿಕ ಬದಲಾವಣೆ ಗಳಾಗುತ್ತದೆ. ಆ ಸಮಯದಲ್ಲಿ ದೇಹಕ್ಕೆ ಹೆಚ್ಚು ಪೋಷಕಾಂಶಗಳು ಬೇಕಾಗುತ್ತದೆ. ಐರನ್ ಮತ್ತು ಪೋಲಿಕ್ ಅಸಿಡ್ ಅವಶ್ಯಕತೆ ಇದ್ದು, ಮುಟ್ಟಾಗುವ ಸಂದರ್ಭದಲ್ಲಿ ಐರನ್ ಮತ್ತು ಪೋಲಿಕ್ ಆಸಿಡ್ ತೆಗೆದುಕೊಳ್ಳಬೇಕು. ಮಲ್ಟಿ ವಿಟಮಿನ್ಸ್ ಅವಶ್ಯಕವಾಗಿದ್ದು, ಮೊಟ್ಟೆ, ಬೇಳೆಗಳು ಸೇರಿದಂತೆ ಉತ್ತಮ ಆಹಾರವನ್ನು ತೆಗೆದುಕೊಳ್ಳಿ ಎಂದು ಮಾಹಿತಿ ನೀಡಿದರು.
ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲೀಸ್ಟ್ ಎಸ್.ಆರ್.ಕೇಶಿನಿ ಮಾತನಾಡಿ, ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಲ್ಲಾ ಕ್ಷೇತ್ರದಲ್ಲಿದಲ್ಲಿ ತಮ್ಮನ್ನು ತಾವು ಉತ್ತಮ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ನಾವು ಇಂದು ಹೆಣ್ಣು ಮಕ್ಕಳ ಜನನವನ್ನು ಪ್ರೋತ್ಸಾಹಿಸುದರೊಂದಿಗೆ, ಉತ್ತಮ ಶಿಕ್ಷಣವನ್ನು ನೀಡಬೇಕು. ಸರ್ಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ವನ್ನು ಜಾರಿಗೆ ತಂದಿದ್ದೂ, ಸೂಕ್ತರೀತಿಯಲ್ಲಿ ಸದುಪಯೋಗ ಪಡಿಕೊಳ್ಳಬೇಕು. ಮಕ್ಕಳಿಗೆ ಯಾವುದೆ ರೀತಿಯ ಸಮಸ್ಯೆಗಳು ಏರ್ಪಟ್ಟಲ್ಲಿ ೧೦೯೮, ಮಹಿಳೆಯರು ಸಮಸ್ಯೆಗಳಿಗೆ ಒಳಗಾದರೆ ೧೮೧, ತುರ್ತು ಕರೆಗಾಗಿ ೧೧೨ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗರ್ಭಿಣಿ /ಬಾಣಂತಿ ಹಾಗೂ ಎರಡನೇ ಹೆಣ್ಣು ಮಗುವಿಗೆ ಮಾತೃವಂದನಾ ಯೋಜನೆ ಇದ್ದು, ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ದೌರ್ಜನ್ಯಕ್ಕೆ ಮಹಿಳೆಯರು ಒಳಗಾದರೆ ಮಡಿಕೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಖಿ ಒನ್ ಸ್ಟಾಫ್ ಸೆಂಟರ್‌ನಲ್ಲಿ ಮಹಿಳೆಯರು ದೂರನ್ನು ನೀಡುದರೊಂದಿಗೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಸಂಯೋಜಕಿ ಮಮತ, ಕರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ರಾಜಶೇಖರ್, ಪಂಚಾಯಿತಿ ಸದಸ್ಯರಾದ ಆಯಿಷ, ಜಯಶ್ರೀ, ಸುಮಾ, ಶಾಲಾ ಶಿಕ್ಷಕರಾದ ಸುಶ್ಮಿತಾ, ಹರ್ಷಿತ, ಅರುಣ, ಕುಸುಮ, ಆರೋಗ್ಯ ಇಲಾಖೆಯ ಜಯಕುಮಾರಿ, ಸೌಮ್ಯ, ಪೋಷಕರು, ಮಹಿಳೆಯರು, ವಿದ್ಯಾರ್ಥಿಗಳು, ಭಾಗಮಂಡಲ ವೃತ್ತದ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net