ಕನ್ನಡ ನಾಡು, ನುಡಿ, ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ

ಪೊನ್ನಂಪೇಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ವಿರಾಜಪೇಟೆ ಶಾಸಕರೂ ಆಗಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಮಾತನಾಡಿದರು.ಎಂ.ಪಿ. ಕೇಶವ ಕಾಮತ್, ಕೋಳೆರ ದಯಾ ಚಂಗಪ್ಪ, ಅಣ್ಣಳಮಾಡ ಲಾಲಾ ಅಪ್ಪಣ್ಣ, ಕಾಳಿಮಾಡ ಪ್ರಶಾಂತ, ಬಾನಂಗಡ ಅರುಣ ಇದ್ದರು.
ಪೊನ್ನಂಪೇಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ವಿರಾಜಪೇಟೆ ಶಾಸಕರೂ ಆಗಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಮಾತನಾಡಿದರು.ಎಂ.ಪಿ. ಕೇಶವ ಕಾಮತ್, ಕೋಳೆರ ದಯಾ ಚಂಗಪ್ಪ, ಅಣ್ಣಳಮಾಡ ಲಾಲಾ ಅಪ್ಪಣ್ಣ, ಕಾಳಿಮಾಡ ಪ್ರಶಾಂತ, ಬಾನಂಗಡ ಅರುಣ ಇದ್ದರು.
Published on
ಗೋಣಿಕೊಪ್ಪಲು:
ಕನ್ನಡ ನಾಡು, ನುಡಿ, ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕರ್ನಾಟಕ ಸರ್ಕಾರದ ಆಶಯ ಕೂಡ ಅದೇ ಆಗಿದೆ ಎಂದು ವಿರಾಜಪೇಟೆ ಶಾಸಕರೂ ಆಗಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದರು. ಶುಕ್ರವಾರ ನಡೆದ ಪೊನ್ನಂಪೇಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಕನ್ನಡಿಗರಾಗಿ ಸಹಕಾರ ಕೊಡಬೇಕು. ಸಮ್ಮೇಳನಗಳು ಯಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಸಮ್ಮೇಳನಗಳ ಕುರಿತು ಮಾಹಿತಿ ನೀಡಿದರು. ಸಮ್ಮೇಳನಗಳಿಗೆ ಎಲ್ಲರ ಸಹಕಾರ ಕೋರಿದರು.
ಪೊನ್ನಂಪೇಟೆ ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಮಾತನಾಡಿ ಇಲ್ಲಿಯವರೆಗಿನ ಎಲ್ಲಾ ಕನ್ನಡ ಕಾರ್ಯಕ್ರಮಗಳಿಗೆ ಸರ್ಕಾರಿ ಅಧಿಕಾರಿಗಳು ತುಂಬಾ ಸಹಕಾರ ನೀಡಿದ್ದಾರೆ. ಇದೇ ರೀತಿ ಸಹಕಾರವನ್ನು ಮುಂದೆಯೂ ನೀಡಬೇಕೆಂದು ಮನವಿ ಮಾಡಿದರು.
ಪೊನ್ನಂಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಾನಂಗಡ ಅರುಣ ವೇದಿಕೆಯಲ್ಲಿ ಇದ್ದರು.
ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ವಿರಾಜಪೇಟೆ ತಾಲೂಕು ತಹಸೀಲ್ದಾರ್ ಪ್ರವೀಣ್, ಪೊನ್ನಂಪೇಟೆ ತಾಲೂಕು ತಹಸೀಲ್ದಾರ್ ಸಂಜನ, ಮಡಿಕೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೇಖರ್, ಪೊನ್ನಂಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜೇಶ್, ಪೊಲೀಸ್ ವೃತ ನಿರೀಕ್ಷಕ ಶಿವರುದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕÀ ಕುಮಾರ್, ವಾರ್ತಾಧಿಕಾರಿ ಚಿನ್ನಸ್ವಾಮಿ ಹಾಗೂ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಎಲ್ಲಾ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು. ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹುದಿಕೇರಿಯಲ್ಲಿ ಜೂ. 1ರಂದು ನಡೆಯಲಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net