ಎಸ್‌ಐಆರ್ ಅರಿವಿಗೆ ಸೋಮವಾರಪೇಟೆಯಲ್ಲಿ ಜಾಥಾ

ಸೋಮವಾರಪೇಟೆ ಪಟ್ಟಣದಲ್ಲಿ ಎಸ್‌ಐಆರ್ ಕುರಿತ ಜಾಗೃತಿ ಜಾಥಾ ನಡೆಯಿತು. ಪರಮೇಶ ಕುಮಾರ್, ಮಂಜೇಶ್, ಕವಿತಾ ಇದ್ದರು.
ಸೋಮವಾರಪೇಟೆ ಪಟ್ಟಣದಲ್ಲಿ ಎಸ್‌ಐಆರ್ ಕುರಿತ ಜಾಗೃತಿ ಜಾಥಾ ನಡೆಯಿತು. ಪರಮೇಶ ಕುಮಾರ್, ಮಂಜೇಶ್, ಕವಿತಾ ಇದ್ದರು.
Published on
ಸೋಮವಾರಪೇಟೆ: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್‌ಐಆರ್-2026 ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈಚೆಗೆ ಸೋಮವಾರಪೇಟೆ ಪಟ್ಟಣದಲ್ಲಿ ಕಾಲ್ನಡಿಗೆ ಜಾಥಾ ಹಾಗೂ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕಾಧಿಕಾರಿ ಪರಮೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಶಾಲೆ ವಿದ್ಯಾರ್ಥಿಗಳು ಎಸ್‌ಐಆರ್-2026 ಕುರಿತು ಜಾಗೃತಿ ಮೂಡಿಸುವ ಫಲಕಗಳನ್ನು ಹಿಡಿದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು. ಈ ವೇಳೆ ಸಾರ್ವಜನಿಕರಿಗೆ ಎಸ್‌ಐಆರ್‌ನ ಮಹತ್ವ ಹಾಗೂ ಚುನಾವಣಾ ಆಯೋಗದ ಸೂಚನೆಗಳ ಕುರಿತು ಮಾಹಿತಿ ನೀಡಿ ಅರಿವು ಮೂಡಿಸಲಾಯಿತು.
ಇದೇ ವೇಳೆ ಶಾಲೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಎಸ್‌ಐಆರ್ ಕುರಿತು ಮಾಹಿತಿ ನೀಡಿದರು. ಪಾಲಕರು ಹಾಗೂ ಸಂಬಂಧಿಕರಿಗೆ ಈ ಕುರಿತು ಮಾಹಿತಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬಿಇಒ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಂಜೇಶ್, ಜ್ಞಾನ ವಿಕಾಸ ಶಾಲೆಯ ಮುಖ್ಯ ಶಿಕ್ಷಕಿ ಕವಿತಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net