ಸಿದ್ದಾಪುರ: ಕೊಡಗು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರಪೇಟೆ ತಾಲೂಕಿನ ಕೂಡಿಗೆ ಡಯಟ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಾಲಿಬೆಟ್ಟ ಲೂರ್ಡ್ಸ್ ಹಿಲ್ ಶಾಲೆಯ ವಿದ್ಯಾರ್ಥಿ ಯದುಕೃಷ್ಣ ಜಾವೆಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ನೆಲ್ಯಹುದಿಕೇರಿ ಗ್ರಾಮದ ಸುನೀಲ್ ಕುಮಾರ್ ಹಾಗೂ ಶೀನ ಅವರ ಪುತ್ರ. ಮುಂದೆ ಬಾಗಲಕೋಟೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟ ಪಾಲ್ಗೊಳ್ಳಲಿದ್ದಾರೆ. ಯದುಕೃಷ್ಣ ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯರು ಹಾಗೂ ಶಿಕ್ಷಕರ ವೃಂದದವರು ಶುಭ ಹಾರೈಸಿದ್ದಾರೆ.