ಮಾನವ-ವನ್ಯಜೀವಿ ಸಂಘರ್ಷ ಕಡಿಮೆ ಮಾಡಲು ಕೈಜೋಡಿಸಿ

ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಹಾಗೂ ಮಾಲ್ದಾರೆ ಗ್ರಾಮಗಳಲ್ಲಿ ಮಾನವ-ವನ್ಯಜೀವಿ  ಸಂಘರ್ಷ ಉಪಶಮನ ಕುರಿತ ಕಾರ್ಯಾಗಾರವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಹಾಗೂ ಮಾಲ್ದಾರೆ ಗ್ರಾಮಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಪಶಮನ ಕುರಿತ ಕಾರ್ಯಾಗಾರವನ್ನು ಶುಕ್ರವಾರ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಅರಣ್ಯಾಧಿಕಾರಿಗಳ ಮನವಿ
  • ಉಪಶಮನ ಕಾರ್ಯಾಗಾರ
ಸಿದ್ದಾಪುರ: ತಿತಿಮತಿ ವಲಯದ ವತಿಯಿಂದ ಚೆನ್ನಂಗಿ ಶಾಖಾ ವ್ಯಾಪ್ತಿಯ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಹಾಗೂ ಮಾಲ್ದಾರೆ ಗ್ರಾಮಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಪಶಮನ ಕುರಿತ ಕಾರ್ಯಾಗಾರವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಮಠ ಪೈಸಾರಿ, ಬಜೆಗೊಳ್ಳಿ, ಬಾಣಂಗಾಲ, ಹುಂಡಿ, ಮಾರ್ಗೋಲಿ ಹಾಗೂ ಮಾಲ್ದಾರೆ ಗ್ರಾಮದ ರೈತರು ಮತ್ತು ಗ್ರಾಮಸ್ಥರು ಭಾಗವಹಿಸಿ, ವನ್ಯಜೀವಿಗಳಿಂದ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ಕೃಷಿಗೆ ಆಗುತ್ತಿರುವ ಹಾನಿಗಳ ಬಗ್ಗೆ ಅಹವಾಲುಗಳನ್ನು ಮಂಡಿಸಿದರು.
ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟಲು ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ವಿಧಾನಗಳು ಹಾಗೂ ಜನರು ಅನುಸರಿಸಬೇಕಾದ ಕ್ರಮಗಳ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಅಲ್ಲದೆ, ಮಾನವ-ವನ್ಯಜೀವಿ ಸಂಘರ್ಷವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಲು ಗ್ರಾಮಸ್ಥರು ಇಲಾಖೆಯೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಮನವಿ ಮಾಡಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಉಪವಲಯ ಅರಣ್ಯಾಧಿಕಾರಿ ಪಿ.ಟಿ.ಶಶಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net