ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಿಂದ ಸಂಪ್ರದಾಯದಂತೆ ಶ್ರೀ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರಕ್ಕೆ ಕದಿರು, ಅಕ್ಕಿ, ತೆಂಗಿನಕಾಯಿ, ಹಣ್ಣು-ಹಂಪಲು ಹಾಗೂ ದೀಪಕ್ಕೆ ಎಣ್ಣೆಯನ್ನು ಸಮರ್ಪಿಸಲಾಯಿತು.
ನಾಪೋಕ್ಲು: ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಿಂದ ಸಂಪ್ರದಾಯದಂತೆ ಶ್ರೀ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರಕ್ಕೆ ಕದಿರು, ಅಕ್ಕಿ, ತೆಂಗಿನಕಾಯಿ, ಹಣ್ಣು-ಹಂಪಲು ಹಾಗೂ ದೀಪಕ್ಕೆ ಎಣ್ಣೆಯನ್ನುಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ತಕ್ಕ ಮುಖ್ಯಸ್ಥರ ಮುಖಾಂತರ ಕ್ಷೇತ್ರಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಸಕಾಲಕ್ಕೆ ಮಳೆಯಾಗಿ ನಾಡಿನ ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರದ ತಕ್ಕ ಮುಖ್ಯಸ್ಥರು ಉಪಸ್ಥಿತರಿದ್ದು, ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರನ್ನು ಹಾಗೂ ದೇವತಕ್ಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಧಾರ್ಮಿಕ ಕಾರ್ಯಕ್ರಮದಲ್ಲಿ ಪೆರಾಜೆ ದೇವಸ್ಥಾನದ ದೇವತಕ್ಕರಾದ ಶ್ರೀ ರಾಜಗೋಪಾಲ್, ಮಾಜಿ ಆಡಳಿತ ಮೊಕ್ತೇಸರರಾದ ನಾಗೇಶ್ ಕುಂದಲ್ಪಾಡಿ, ತಕ್ಕರಾದ ಕೋಡಿ ಭಾಸ್ಕರ ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.