ಕನ್ನಡ ಭಾಷೆಯು ಇಂದು ಜಾತಿ, ಧರ್ಮ ಹಾಗೂ ಗಡಿಯನ್ನು ಮೀರಿ ಬೆಳೆದಿದೆ. ಇದಕ್ಕೆ ಒಂದು ಮುಖ್ಯ ಕಾರಣವೆಂದರೆ ಕನ್ನಡ ಸಾಹಿತ್ಯ ಪರಿಷತ್ತು. ತನ್ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ನಿರಂತರವಾಗಿ ಪೋಷಿಸುತ್ತ ವಿವಿಧ ಕಾರ್ಯಕ್ರಮಗಳ ಮೂಲಕ ಮುಂದಿನ ತಲೆಮಾರಿಗೆ ಕನ್ನಡದ ಶ್ರೇಷ್ಠತೆಯನ್ನು ಪರಿಚಿಸುವಂತಹ ಕೆಲಸವನ್ನು ಮಾಡುತ್ತಿದೆ . ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಹೇಳುವುದಾದರೆ 10ನೇ ಶತಮಾನದಿಂದ ಹಿಡಿದು ಇಂದಿನವರೆಗೂ ಕನ್ನಡ ಸಾಹಿತ್ಯವೆಂಬುದು ಸುಧೀರ್ಘವಾಗಿ ಜೀವಂತಿಕೆಯನ್ನು ಉಳಿಸಿಕೊಂಡು ಬೆಳವಣಿಗೆಯನ್ನು ಕಾಣುತ್ತಾ ಬಂದಿದೆ ಎಂದರು.