ಆಟೋ ಚಾಲಕರಿಂದ ಕನ್ನಡ ರಾಜ್ಯೋತ್ಸವ

ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಏರ್ಪಡಿಸಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಗಣ್ಯರು ಪಾಲ್ಗೊಂಡಿದ್ದರು. ಬಿ.ಎ. ದಿನೇಶ್, ವಿ.ಎನ್. ತೇಜಸ್ ನಾಗೇಶ್, ಕೃಷ್ಣದರ್ಶನ್(ಕಿಟ್ಟಿ), ಸಂತೋಷ್ ಕುಮಾರ್ ಗೌಡ, ಮುನೀರ್, ಮೂರ್ತಿ ಮತ್ತಿತರರು ಇದ್ದರು.
ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಏರ್ಪಡಿಸಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಗಣ್ಯರು ಪಾಲ್ಗೊಂಡಿದ್ದರು. ಬಿ.ಎ. ದಿನೇಶ್, ವಿ.ಎನ್. ತೇಜಸ್ ನಾಗೇಶ್, ಕೃಷ್ಣದರ್ಶನ್(ಕಿಟ್ಟಿ), ಸಂತೋಷ್ ಕುಮಾರ್ ಗೌಡ, ಮುನೀರ್, ಮೂರ್ತಿ ಮತ್ತಿತರರು ಇದ್ದರು.
Published on
ಕುಶಾಲನಗರ:
ಇಲ್ಲಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಶನಿವಾರ ಬಸ್ ನಿಲ್ದಾಣ ಆವರಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು. ಧ್ವಜಾರೋಹಣ ನೆರವೇರಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ) ಜಿಲ್ಲಾಧ್ಯಕ್ಷ ಬಿ.ಎ. ದಿನೇಶ್ ಮಾತನಾಡಿ, ಕನ್ನಡ ನಾಡು, ನುಡಿ, ನೆಲ, ಜಲ ಸಂರಕ್ಷಣೆಗೆ ನಮ್ಮ ಸಂಘಟನೆ ಯಾವತ್ತೂ ಮುಂದೆ ಇರುತ್ತದೆ. ಕನ್ನಡ ನಾಡು, ನುಡಿ ಬಗ್ಗೆ ಹಲವಾರು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಅದೇ ರೀತಿ ಆಟೋ ಚಾಲಕರ ಸಂಘ ಕೂಡ ಕನ್ನಡ ಹಾಗೂ ಭುವನೇಶ್ವರಿ ತಾಯಿ ಸೇವೆಯಲ್ಲಿ ಮುಂದೆ ಇದ್ದು. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವವನ್ನು ಎರಡು ದಿನಗಳ ಕಾಲ ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ತಮ್ಮ ಕನ್ನಡ ಪ್ರೇಮವನ್ನು ಮೆರೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಉದ್ಯಮಿ ವಿ.ಎನ್. ತೇಜಸ್ ನಾಗೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬರೂ ಕನ್ನಡ ಭಾಷೆ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕು. ಮನೆ ಮನದಲ್ಲಿ ಕನ್ನಡಭಾಷೆ ಬೆಳವಣಿಗೆಗೆ ಹೆಚ್ಚಿನ ಗಮನ ಹರಿಸಬೇಕು. ಆಟೋ ಚಾಲಕರ ಕನ್ನಡ ಸೇವೆ ಹಾಗೂ ಸಾಮಾಜಿಕ ಕಾರ್ಯ ಶ್ಲಾಘನೀಯ ಎಂದರು.
ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೃಷ್ಣದರ್ಶನ್(ಕಿಟ್ಟಿ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪತ್ರಕರ್ತ ಹೆಚ್.ಎಂ. ರಘಕೋಟಿ. ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಗೌಡ, ಖಜಾಂಚಿ ಮುನೀರ್, ಮಾಜಿ ಕಾರ್ಯದರ್ಶಿ ಮೂರ್ತಿ, ಮಂಜುಬೆಳ್ಳುಳ್ಳಿ, ಕಾರು ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಉದಯಕುಮಾರ್, ಕಂದನ್ ಲಾರಿ ಟ್ರಾನ್ಸ್ ಸ್ಪೋರ್ಟ್ಸ್ ಅಧ್ಯಕ್ಷ ಸಿ.ಕೆ. ಮಹೇಶ್, ಮತ್ತಿತರರು ಪಾಲ್ಗೊಂಡಿದ್ದರು.
ಸಭಾ ಕಾರ್ಯಕ್ರಮದ ನಂತರ ಮೈಸೂರು ನಾರಾಯಣ ಆಸ್ಪತ್ರೆಯ ವೈದ್ಯರಾದ ಡಾ. ಪೂರ್ಣಿಮಾ ನೇತೃತ್ವದಲ್ಲಿ ಆಟೋ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಇಸಿಜಿ ಪರೀಕ್ಷೆ ನಡೆಸಲಾಯಿತು. ರಾಜ್ಯೋತ್ಸವ ಅಂಗವಾಗಿ ನೆರೆದಿದ್ದ ಕನ್ನಡಾಭಿಮಾನಿಗಳಿಗೆ ಅನ್ನದಾನ ವ್ಯವಸ್ಥೆ ಕಲ್ಪಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net