ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಮುಖ್ಯ ರಸ್ತೆಗಾಗಿ ಸಾಗಿತು. ಮೆರವಣಿಗೆಯಲ್ಲಿ ಮಂಗಳ ವಾದ್ಯ, ಚಂಡೆ ವಾದ್ಯ, ಕಳಸ ಹೊತ್ತ ಮಹಿಳೆಯರು, ಗೊಂಬೆಗಳು, ಪೂಜಾ ಕುಣಿತ, ಡೊಳ್ಳು ಕುಣಿತ, ಬ್ಯಾಂಡ್ ಸೆಟ್, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಜೀವಿನಿ ಮಹಿಳಾ ಒಕ್ಕೂಟ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ, ಅಂಗನವಾಡಿ ಸಂಘಟನೆ, ಸ್ತ್ರೀಶಕ್ತಿ ಒಕ್ಕೂಟ, ಆಶಾ ಕಾರ್ಯಕರ್ತೆಯರು, ಶಿಕ್ಷಕರುಗಳು, ಸಂಘ ಸಂಸ್ಥೆಗಳ ಮತ್ತು ಸಮಾಜಗಳ ಪ್ರತಿನಿಧಿಗಳು, ಆಟೋ ಮತ್ತು ವಾಹನ ಚಾಲಕರ ಸಂಘದವರು, ಎನ್‌ಸಿಸಿ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡದೊಂದಿಗೆ ಮೆರವಣಿಗೆ ನಡೆಯಿತು. ವಿವಿಧ ಇಲಾಖೆಗಳು ಮಾಹಿತಿ ಮಳಿಗೆ ನಿರ್ಮಿಸಿ, ಇಲಾಖೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ, ಗಮನ ಸೆಳೆದರು.