ಕಾರ್ಯಪ್ಪ ಕಾರ್ಯಗಳು ದೇಶಕ್ಕೇ ಮಾದರಿ

ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ಕೊಡಗು ವಿದ್ಯಾಲಯ ಶಾಲೆ ಸಭಾಂಗಣದಲ್ಲಿ ನಡೆದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನ್ಮದಿನಾಚರಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯು ಉದ್ಘಾಟಿಸಿದರು. ಮೈಥಿಲಿ ರಾವ್, ಈರಮಂಡ ಹರಿಣಿ ವಿಜಯ್, ಕೆ.ಎಸ್. ಸುಮಿತ್ರ, ಪಿ. ರವಿ ಮತ್ತಿತರರು ಇದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ಕೊಡಗು ವಿದ್ಯಾಲಯ ಶಾಲೆ ಸಭಾಂಗಣದಲ್ಲಿ ನಡೆದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನ್ಮದಿನಾಚರಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯು ಉದ್ಘಾಟಿಸಿದರು. ಮೈಥಿಲಿ ರಾವ್, ಈರಮಂಡ ಹರಿಣಿ ವಿಜಯ್, ಕೆ.ಎಸ್. ಸುಮಿತ್ರ, ಪಿ. ರವಿ ಮತ್ತಿತರರು ಇದ್ದರು.
Published on
ಮಡಿಕೇರಿ:
ಭಾರತೀಯ ಸೇನೆಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಮಹತ್ವದ ಕಾರ್ಯಗಳು ಇಡೀ ವಿಶ್ವಕ್ಕೆ ಮಾದರಿ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯು ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ನಗರದ ಕೊಡಗು ವಿದ್ಯಾಲಯ ಶಾಲೆ ಸಭಾಂಗಣದಲ್ಲಿ ಬುಧವಾರ ನಡೆದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನಾಚರಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದ ಪ್ರಥಮ ಮಹಾ ದಂಡನಾಯಕರಾಗಿ ಭಾರತೀಯ ಸೇನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಸೇನಾ ಸಾಧನೆಯನ್ನು ಸ್ಮರಿಸುವಂತಾಗಬೇಕು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಕೊಡಗಿನ ಕಣ್ಮಣಿಗಳು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಸಮಯಪ್ರಜ್ಞೆ, ಶಿಸ್ತಿಗೆ ಹೆಸರುವಾಸಿಯಾಗಿದ್ದರು. ಅವರಂತೆ ಏರ್ ಮಾರ್ಷಲ್(ನಿವೃತ್ತ) ಕಾರ್ಯಪ್ಪ ಅವರು ಕೂಡ ಭಾರತೀಯ ಸೇನೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಂತಹ ಧೀಮಂತ ನಾಯಕರು ಹುಟ್ಟಿದ ನಾಡಲ್ಲಿ ನಾವು ಹುಟ್ಟಿರುವುದು ಭಾಗ್ಯ ಎಂದು ಹೇಳಿದರು.
ಗೈಡ್ಸ್ ಜಿಲ್ಲಾ ತರಬೇತಿ ಆಯುಕ್ತರಾದ ಮೈಥಿಲಿ ರಾವ್ ಮಾತನಾಡಿ, ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನವನ್ನು ಎಲ್ಲರೂ ಸಂಭ್ರಮಿಸಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಜಿಲ್ಲೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದೀಗ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ವಿದ್ಯಾರ್ಥಿಗಳು ಸ್ಕೌಟ್ಸ್-ಗೈಡ್ಸ್, ಎನ್‌ಸಿಸಿ, ಕ್ರೀಡೆ ಸೇರಿದಂತೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು. ಪುಸ್ತಕ, ಸಾಮಾಜಿಕ ಜಾಲತಾಣವನ್ನು ಸದುಪಯೋಗ ಪಡಿಸಿಕೊಂಡು ಅದರಲ್ಲಿನ ಮಾಹಿತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಾಗೂ ಇತರರಿಗೂ ಮಾಹಿತಿ ನೀಡಬೇಕು. ವಾಹನದಲ್ಲಿ ಚಲಿಸುವಾಗ ಮಾತ್ರವಲ್ಲದೆ ನಡೆಯುವಾಗಲೂ ನಿಯಮವನ್ನು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್. ಸುಮಿತ್ರ, ಆಡಳಿತಾಧಿಕಾರಿ ಪಿ. ರವಿ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ಎನ್.ಯು. ನೀಲಮ್ಮ, ಅರುಣ್ ಕುಮಾರ್, ಕಾರ್ಯದರ್ಶಿಗಳಾದ ಸುಚಿತಾ ಕಾವೇರಪ್ಪ, ಎಂ.ಟಿ. ಸೂರಜ್ ಕುಮಾರ್, ಪದಾಧಿಕಾರಿಗಳಾದ ಗುಲ್‌ಶನ್, ಕೆ. ಮಮತ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆ, ರಸ್ತೆ ಸುರಕ್ಷತೆ ಕುರಿತು ನಡೆದ ನೃತ್ಯ ಗಮನ ಸೆಳೆಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನ್ಮದಿನಾಚರಣೆ ಹಾಗೂ ರಸ್ತೆ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ನಡೆಸಲಾದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net