ಪರಿಸರ ಸಂರಕ್ಷಣೆಯೂ ಭಗವಂತನ ಸೇವೆ

ಕುಶಾಲನಗರ ತಾಲೂಕು ತೊರೆನೂರು ವಿರಕ್ತ ಮಠದಲ್ಲಿ ಹಮ್ಮಿಕೊಂಡಿದ್ದ ಹಿರಿಯ ಶ್ರೀ ಮಹಾಂತ ಸ್ವಾಮೀಜಿ ಸಂಸ್ಮರಣೋತ್ಸವ  ಸಮಾರಂಭವನ್ನು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಉದ್ಘಾಟಿಸಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ , ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಇತರರು ಇದ್ದರು.
ಕುಶಾಲನಗರ ತಾಲೂಕು ತೊರೆನೂರು ವಿರಕ್ತ ಮಠದಲ್ಲಿ ಹಮ್ಮಿಕೊಂಡಿದ್ದ ಹಿರಿಯ ಶ್ರೀ ಮಹಾಂತ ಸ್ವಾಮೀಜಿ ಸಂಸ್ಮರಣೋತ್ಸವ ಸಮಾರಂಭವನ್ನು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಉದ್ಘಾಟಿಸಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ , ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನದಿ, ಸರೋವರಗಳು, ನೀರು, ಮಣ್ಣು, ಗಾಳಿ ಮೊದಲಾದವುಗಳ ಕೊಡುಗೆ ಅನನ್ಯ. ಇಂತಹ ಸುಂದರ ಪರಿಸರವನ್ನು ನಾವು ಸುರಕ್ಷಿತವಾಗಿ ಇರಿಸಿಕೊಳ್ಳುವುದೇ ಭಗವಂತನಿಗೆ ಸಲ್ಲಿಸುವ ಮಹತ್ತರ ಕಾಣಿಕೆ
ಕುಶಾಲನಗರ : ಪರಿಸರ ಸಂರಕ್ಷಣೆಯೂ ಭಗವಂತನ ಸೇವೆಯಾಗಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅಭಿಪ್ರಾಯಿಸಿದರು.
ಕುಶಾಲನಗರ ತಾಲೂಕು ತೊರೆನೂರು ವಿರಕ್ತ ಮಠದಲ್ಲಿ ಹಮ್ಮಿಕೊಂಡಿದ್ದ ಹಿರಿಯ ಶ್ರೀ ಮಹಾಂತ ಸ್ವಾಮೀಜಿ ಸಂಸ್ಮರಣೋತ್ಸವ ಧಾರ್ಮಿಕ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ನದಿ, ಸರೋವರಗಳು, ನೀರು, ಮಣ್ಣು, ಗಾಳಿ ಮೊದಲಾದವುಗಳ ಕೊಡುಗೆ ಅನನ್ಯ. ಇಂತಹ ಸುಂದರ ಪರಿಸರವನ್ನು ನಾವು ಸುರಕ್ಷಿತವಾಗಿ ಇರಿಸಿಕೊಳ್ಳುವುದೇ ಭಗವಂತನಿಗೆ ಸಲ್ಲಿಸುವ ಮಹತ್ತರ ಕಾಣಿಕೆ ಎಂದರು.
ವಚನಗಳಲ್ಲಿ ವೈಜ್ಞಾನಿಕ ನೆಲೆಗಳಿವೆ : 12ನೇ ಶತಮಾನದ ಶರಣರ ಚಿಂತನೆಗಳು ಎಲ್ಲ ಕಾಲಘಟ್ಟಕ್ಕೂ ಪ್ರಸ್ತುತವಾಗಿವೆ. ವಚನಗಳಲ್ಲಿ ವೈಜ್ಞಾನಿಕ ನೆಲೆಗಳಿವೆ. ಅನುಭವ ಮಂಟಪದಲ್ಲಿ ಅಲ್ಲಮಪ್ರಭುವಿನಷ್ಟೇ ಸಮಾನ ಅವಕಾಶಗಳು ಎಲ್ಲ ಶರಣರಿಗೂ ಇತ್ತು. ಆದರೆ ಸಮಾನತೆಗಾಗಿ ಹೋರಾಟ ಇನ್ನೂ ಜೀವಂತವಾಗಿರುವುದು ವಿಷಾದನೀಯ ಎಂದವರು ಹೇಳಿದರು. ಅಹಂಕಾರ ಎಂಬುದು ವಿನಾಶಕ್ಕೆ ಮೂಲ. ನಿಜವಾದ ಜ್ಞಾನಿಯಾದವನು ನಿತ್ಯವೂ ಕಲಿಕೆಯತ್ತಲೇ ಇರಬೇಕು ಎಂದು ಶ್ರೀಗಳು ಹೇಳಿದರು.
ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಮಾತನಾಡಿ, ಸದ್ಭಾವನೆ, ಸತ್ ಚಿಂತನೆ, ಸನ್ನಡತೆ ಪ್ರತಿಯೊಬ್ಬರಲ್ಲೂ ಅಂತರ್ಗತವಾಗಬೇಕು ಎಂದರು. ಸಮಾಜದಲ್ಲಿ ಹಲವರಿಗೆ ಇರುವ ದುರಾಸೆಗಳೇ ದುಃಖಕ್ಕೆ ಮೂಲವಾಗಿವೆ. ಮಾನಸಿಕ ತುಮುಲಗಳನ್ನು ಗೆಲ್ಲಬೇಕು ಎಂದರೆ ಅದಕ್ಕೆ ತ್ಯಾಗ ಮುಖ್ಯ. ಕಾಯಕ ಮತ್ತು ದಾಸೋಹ ಪರಿಕಲ್ಪನೆಗಳನ್ನು ಅಳವಡಿಸಿಕೊಂಡರೆ ಬದುಕು ಸುಗಮ ಎಂದರು.
ನೈತಿಕ ಮೌಲ್ಯಗಳು ನಶಿಸುತ್ತಿವೆ :
ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಆಧುನಿಕ ಜೀವನ ಪದ್ಧತಿಯಿಂದಾಗಿ ನೈತಿಕ ಮೌಲ್ಯಗಳು ನಶಿಸುತ್ತಿವೆ ಎಂದರು. ಇಂದಿನ ಮಕ್ಕಳಿಗೆ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಶಿಕ್ಷಣದ ಅಗತ್ಯವಿದೆ. ಯಾರಿಗೂ ನೆಮ್ಮದಿ ಇಲ್ಲವಾಗಿರುವ ಕಾಲದಲ್ಲಿ ದ್ವೇಷ, ಅಸೂಯೆಗಳಿಂದ ದೂರವಿರಬೇಕು ಎಂದರು. ಬಹಳಷ್ಟು ಸಂಪಾದಿಸಿದರೂ ಬರಿಗೈಲಿ ಹೋಗುವ ಮನುಷ್ಯ ಪ್ರಾಕೃತಿಕ ಸಂಪತ್ತನ್ನು ನಾಶ ಮಾಡಿರುವ ಪರಿಣಾಮವೇ ತಾಪಮಾನ ಏರಿಕೆ, ವಾಯುಭಾರ ಕುಸಿತ. ಈ ಬಗ್ಗೆ ಜಾಗೃತಿ ಅಗತ್ಯ ಎಂದರು.
*
ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶಿರಂಗಾಲದ ಎಸ್.ವಿ.ನಂಜುಂಡಪ್ಪ, ಮರೂರಿನ ಎಚ್.ವಿ.ಶಿವರುದ್ರಪ್ಪ, ಕುಶಾಲನಗರದ ಡಾ.ಹೇಮಲತಾ, ತೊರೆನೂರಿನ ಟಿ.ಬಿ. ಜಗದೀಶ್ ಅವರನ್ನು ಗೌರವಿಸಲಾಯಿತು.
ಬೆಟ್ಟದಪುರ ಮಠದ ಶ್ರೀ ಚನ್ನವೀರ ದೇಶೀಕೇಂದ್ರ ಸ್ವಾಮೀಜಿ, ಗಾವಡಗೆರೆ ಮಠದ ನಟರಾಜ ಸ್ವಾಮೀಜಿ, ಹಾಸನದ ತಣ್ಣೀರು ಹಳ್ಳ ಮಠದ ವಿಜಯಕುಮಾರ ಸ್ವಾಮೀಜಿ, ಚಿಲುಮೆ ಮಠದ
ಜಯದೇವ ಸ್ವಾಮೀಜಿ, ವಿರಾಜಪೇಟೆ ಅರಮೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಕೆಸವತ್ತೂರು ಮಠದ ಬಸವರಾಜೇಂದ್ರ ಸ್ವಾಮೀಜಿ, ಕಲ್ಲುಮಠದ ಮಹಾಂತ ಸ್ವಾಮೀಜಿ ಇದ್ದರು.
ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಎಚ್.ವಿ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ಸಾಂಬಶಿವಯ್ಯ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಮೂರ್ತಿ, ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಮಧುಸೂದನ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net