ಸುಂಟಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ತೋಟಗಳ ಮಾಲೀಕರು ಹಾಗೂ ವ್ಯವಸ್ಥಾಪಕರೊಂದಿಗೆ ಶನಿವಾರ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಹೊರ ರಾಜ್ಯಗಳಿಂದ ಕೂಲಿ ಕೆಲಸಕ್ಕೆ ಆಗಮಿಸಿ ತೋಟದ ಲೈನ್‌ಮನೆಗಳಲ್ಲಿ ನೆಲೆಸಿರುವ ಕಾರ್ಮಿಕರ ಸಂಪೂರ್ಣ ಮಾಹಿತಿಯ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ಒದಗಿಸಬೇಕು. ಅವರ ಮೇಲೆ ನಿಗಾ ವಹಿಸಬೇಕು. ಅವರ ನಡಾವಳಿಕೆಗಳಲ್ಲಿ ಸಂಶಯಗಳು ಮೂಡಿಬಂದಲ್ಲಿ ಕೂಡಲೇ ಪೊಲೀಸ್‌ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಿದರು.