ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ

ಸೋಮವಾರಪೇಟೆ ಸಮೀಪದ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ಡಾ.ಮಂತರ್‌ಗೌಡ, ಪ್ರಸಾದ್, ಪ್ರಭುದೇವ್, ಉಲ್ಲಾಸ್ ಇತರರಿದ್ದರು.
ಸೋಮವಾರಪೇಟೆ ಸಮೀಪದ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ಡಾ.ಮಂತರ್‌ಗೌಡ, ಪ್ರಸಾದ್, ಪ್ರಭುದೇವ್, ಉಲ್ಲಾಸ್ ಇತರರಿದ್ದರು.
Published on
ಸೋಮವಾರಪೇಟೆ: ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭ ಭಾನುವಾರ ನೆರವೇರಿತು.
ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿಯನ್ನು ಸಾಧಿಸಬಹುದು ಎಂಬುದು ಕಟು ಸತ್ಯವಾಗಿದ್ದು, ರಾಜ್ಯದಲ್ಲಿ ಎಲ್‌ಕೆಜಿಯಿಂದ ಪಿಯುಸಿಯವರೆಗೆ 1.16 ಕೋಟಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಸರ್ಕಾರ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಪ್ರಾರಂಭಿಸಲಾಗುವುದು. ಈ ನಿಟ್ಟಿನಲ್ಲಿ 18 ಸಾವಿರ ಶಿಕ್ಷಕರ ಅಯ್ಕೆ ಪ್ರಕ್ರಿಯೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ 51 ಸಾವಿರ ಅತಿಥಿ ಶಿಕ್ಷಕರು ಕೆಲಸ ಮಾಡುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು.
ಸರ್ಕಾರ 46 ಸಾವಿರ ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್ ಸಂಪರ್ಕ ನೀಡಲಾಗಿದ್ದು, ಶಿಕ್ಷಕರು ರಾತ್ರಿ ಸಮಯದಲ್ಲಿ ಹೆಚ್ಚುವರಿ ತರಗತಿಗಳನ್ನು ನಡೆಸಲು ಹಾಗೂ ಮಕ್ಕಳಿಗೆ ಗುಣಾತ್ಮಕ ಕಂಪ್ಯೂಟರ್ ಶಿಕ್ಷಣವನ್ನು ಒದಗಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ಸರ್ಕಾರದ ಹಲವು ಯೋಜನೆಗಳಿಂದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣದ ಶಿಕ್ಷಣವು ಕೇವಲ ವ್ಯಕ್ತಿತ್ವ ನಿರ್ಮಾಣದ ಪಯಣವಾಗಬೇಕು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಮಕ್ಕಳ ಭವಿಷ್ಯ ಕಟ್ಟುವ ನಿಜವಾದ ಅಡಿಪಾಯಗಳಾಗಿವೆ. ಬೇಳೂರು ಶಾಲೆಯು ಶತಮಾನದಿಂದಲೂ ಈ ದಿಸೆಯಲ್ಲಿ ಮಾಡಿದ ಸೇವೆ ಶ್ಲಾಘನೀಯ ಎಂದು ಹೇಳಿದರು. ಬೇಳೂರು ಶಾಲೆಯಂತಹ ಹಳೆಯ ಸಂಸ್ಥೆಗಳು ಹೊಸ ಪೀಳಿಗೆಗೆ ಮಾದರಿಯಾಗಬೇಕು ಎಂದು ತಿಳಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಪ್ರಸಾದ್, ಶತಮನೋತ್ಸವ ಸಮಿತಿ ಅಧ್ಯಕ್ಷ ಜಿ.ಎಸ್.ಪ್ರಭುದೇವ್, ಗೌರವ ಅಧ್ಯಕ್ಷ ಕೆ.ಡಿ.ಕುಮಾರ್, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ಪಿ.ಉಲ್ಲಾಸ್, ಬೇಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುದರ್ಶನ್, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಗಣ್ಯರಾದ ಡಾ.ಚಂದ್ರಮೌಳಿ, ಕೆ.ಪಿ.ಚಂದ್ರಕಲಾ, ಡಿಡಿಪಿಯು ಚಿದಾನಂದ ಮೂರ್ತಿ, ಡಿಡಿಪಿಐ ಬಸವರಾಜು, ಡಾ.ವೇಣುಗೋಪಾಲ್, ತಹಸೀಲ್ದಾರ್ ಕೃಷ್ಣಮೂತಿ, ಬಿಇಒ ಕೃಷ್ಣಪ್ಪ, ಬಿ.ಬಿ.ಸತೀಶ್ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net