ಲೋಕೋಪಯೋಗಿ ಎಇಇ ಮನೆಗೆ ಲೋಕಾಯುಕ್ತ ದಾಳಿ

ಮಡಿಕೇರಿ ಲೋಕೋಪಯೋಗಿ ಇಲಾಖೆ ಕಚೇರಿ
ಮಡಿಕೇರಿ ಲೋಕೋಪಯೋಗಿ ಇಲಾಖೆ ಕಚೇರಿ
Published on
ಮಡಿಕೇರಿ: ಮಡಿಕೇರಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಗಿರೀಶ್ ಅವರ ವಸತಿಗೃಹ, ಮೈಸೂರಿನ ನಿವಾಸದ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಮಡಿಕೇರಿ ಕಚೇರಿ, ಕುಶಾಲನಗರ, ಮೈಸೂರಿನ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿರುವ ದೂರಿನ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಲೋಕಾಯುಕ್ತ ಎಸ್.ಪಿ.ಉದೇಶ್, ಲೋಕಾಯುಕ್ತ ಡಿವೈಎಸ್‌ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆಸಲಾಗಿದೆ. ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್ ವೀಣಾ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಬೆಳಗ್ಗೆ 6 ಗಂಟೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಏಕಕಾಲಕ್ಕೆ ನಡೆದ ದಾಳಿ ವೇಳೆ ಸುಮಾರು 4 ಕೋಟಿ ರೂ.ಗೂ ಅಧಿಕ ಮೌಲ್ಯದ ಚರ, ಹಾಗೂ ಸ್ಥಿರ ಆಸ್ತಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಸ್ಥಿರಾಸ್ತಿಯ ಪೈಕಿ 1.89 ಕೋಟಿ ರೂ. ಮೌಲ್ಯದ ಒಂದು ಮನೆ ಹಾಗೂ 4 ನಿವೇಶನಗಳು, ಚರಾಸ್ತಿಯ ಪೈಕಿ 5.53 ಲಕ್ಷ ರೂ. ನಗದು, 1.81 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು, 9 ಲಕ್ಷ ರೂ. ಮೌಲ್ಯದ ವಾಹನಗಳು, 40 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ. ಒಟ್ಟು 4.26 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net