ಪ್ರತಿಭೆ ಆನವರಣಗಳಿಸಿದೆ ವಿದ್ಯಾರ್ಥಿಗಳು

ಶಂಸುಲ್ ಉಲಮ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನ ಗಮನ ಸೆಳೆಯಿತು.
ಶಂಸುಲ್ ಉಲಮ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನ ಗಮನ ಸೆಳೆಯಿತು.
Published on
ಸಿದ್ದಾಪುರ : ಸಮೀಪದ ಪೆರುಂಬಾಡಿಯಲ್ಲಿರುವ ಶಂಸುಲ್ ಉಲಮ ಎಜುಕೇಶನಲ್ ಅಕಾಡೆಮಿ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ವಿವಿಧ ಸಾಂಸ್ಕೃತಿಕ, ಆರೋಗ್ಯ, ಪರಿಸರ ಕಾಳಜಿ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಸೇರಿದಂತೆ ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಯೋಜಿಸಲಾಗಿತ್ತು.
ಎಸ್‌ಇಎ ಕ್ಯಾಂಪಸ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಾರ್ಷಿಕೋತ್ಸವವನ್ನು ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕಿ ಬಿಂದು ಉದ್ಘಾಟಿಸಿ ಮಾತನಾಡಿದರು.
ಈ ಹಿಂದೆ ಅದೆಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಲವು ಸಮಸ್ಯೆಗಳ ನಡುವೆಯೂ ಶಿಕ್ಷಣ ಕಲಿತು ಉನ್ನತ ಹುದ್ದೆ, ಸೇವೆ, ಸಾಧನೆ ಮೂಲಕ ಗುರುತಿಸಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಗುಣವಾಗಿ ಶಾಲೆ- ಕಾಲೇಜುಗಳಲ್ಲಿ ಪೂರಕವಾದ ವಾತಾವರಣ ಇದ್ದು, ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬ್ಲಾಕ್ ಸಂಪನ್ಮೂಲ ವ್ಯಕ್ತಿ ಶೈಲಾ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಉದ್ದೇಶದಿಂದ ಮಹಿಳಾ ಕಾಲೇಜು ಪ್ರಾರಂಭಿಸಲಾಗಿದೆ. ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಿ ಕಾಲೇಜು ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಸೈನಿಕ ಸಲಾಂ ಮಾತನಾಡಿದರು.
ಇದೇ ಸಂದರ್ಭ ವಿದ್ಯಾರ್ಥಿಗಳಿಂದ ವೈವಿಧ್ಯ ನಾಟಕ, ನೃತ್ಯ ಕಾರ್ಯಕ್ರಮ ಜರುಗಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.
ಅರ್ಜಿ ಗ್ರಾಮ ಪಂಚಾಯಿತಿ ಅಧಕ್ಷೆ ಫಾತಿಮಾ, ಉಪಾಧ್ಯಕ್ಷ ಉಪೇಂದ್ರ, ಅಭಿವೃದ್ಧಿ ಅಧಿಕಾರಿ ಪ್ರಮೋದ್, ಕ್ಲಸ್ಟರ್ ಅಧಿಕಾರಿ ನೀಲನ, ಸಮಾಜ ಸೇವಕರಾದ ಅಬ್ದುಲ್ ಸತ್ತಾರ್, ಅಬ್ದುಲ್ ರಶೀದ್, ಅಶ್ರಫ್, ನಾಸರ್, ಸಂಸ್ಥೆಯ ಪ್ರಾಂಶುಪಾಲೆ ಭಾನುಮತಿ, ಶಂಸುಲ್ ಉಲಮ ಎಜುಕೇಶನಲ್ ಅಕಾಡೆಮಿ ಮುಖ್ಯಸ್ಥ ಸಿಪಿಎಂ ಬಶೀರ್ ಹಾಜಿ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net