ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಲಿ

ಸೋಮವಾರಪೇಟೆ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಸ್ಫರ್ಧಾ ಕಾರ್ಯಕ್ರಮವನ್ನು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರತ್ನಕುಮಾರ್ ಉದ್ಘಾಟಿಸಿದರು. ಹೇಮಲತಾ, ಪ್ರೇಮಾ, ಸತೀಶ್ ಇದ್ದರು.
ಸೋಮವಾರಪೇಟೆ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಸ್ಫರ್ಧಾ ಕಾರ್ಯಕ್ರಮವನ್ನು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರತ್ನಕುಮಾರ್ ಉದ್ಘಾಟಿಸಿದರು. ಹೇಮಲತಾ, ಪ್ರೇಮಾ, ಸತೀಶ್ ಇದ್ದರು.
Published on
ಸೋಮವಾರಪೇಟೆ: ಕನ್ನಡ ರಾಜ್ಯೋತ್ಸವ ಆಚರಣೆ ನವಂಬರ್ ತಿಂಗಳಿಗೆ ಮಾತ್ರ ಸೀಮಿತ ಆಗಬಾರದು. ಭಾವನಾತ್ಮಕ ಸ್ಪರ್ಶ ಇರುವ ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು ಎಂದು ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರತ್ನಕುಮಾರ್ ಅಭಿಪ್ರಾಯಪಟ್ಟರು.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕನ್ನಡ ಭಾಷಾ ಸಂಘ ಅರಳಿಕಟ್ಟೆ ವತಿಯಿಂದ ಶುಕ್ರವಾರ ರಾಜ್ಯೋತ್ಸವ ಅಂಗವಾಗಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ತಾಲೂಕು ಮಟ್ಟದ ರಸಪ್ರಶ್ನೆ ಸ್ಫರ್ಧೆ ಉದ್ಘಾಟಿಸಿ ಮಾತನಾಡಿದರು.
ಕನ್ನಡವನ್ನು ನಮ್ಮ ಬದುಕಿನ ಒಂದು ಭಾಗವನ್ನಾಗಿ ಪರಿಗಣಿಸಿ ಪೋಷಿಸಬೇಕು. ಶಾಲೆ ಮತ್ತು ಮನೆಮನಗಳಲ್ಲಿ ವರ್ಷಪೂರ್ತಿ ಕನ್ನಡದ ಸ್ಮರಣೆ ಇರಬೇಕು ಎಂದರು.
ಮುಖ್ಯಅತಿಥಿಗಳಾಗಿ ಪಾಲ್ಗೊಂಡಿದ್ದ ಶಿಕ್ಷಕ ಹಾಗೂ ಸಾಹಿತಿ ಸುಕುಮಾರ್ ಮಾತನಾಡಿ, ಸಿರಿಗನ್ನಡಂ ಗೆಲ್ಗೆ ಎಂಬುದು ಕನ್ನಡಾಭಿಮಾನದ ವೇದಘೋಷದಂತಿದೆ. ಕನ್ನಡದ ಸ್ಮರಣೆ, ಆಚರಣೆಯು ಭಾಷೆಯ ಅಸ್ಮಿತೆಗೆ ಸಾಕ್ಷಿಯಾಗಿದೆ ಎಂದರು.
ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಹೇಮಲತಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷೆ ಎಲ್.ಎಂ.ಪ್ರೇಮಾ, ಶಿಕ್ಷಕರಾ ಕಾಜೂರು ಸತೀಶ್ ವಿಜಯಕುಮಾರ್, ರಾಜರತ್ನ, ಧನ್ಯಾ ಸೇರಿದಂತೆ ತಾಲೂಕಿನ ವಿವಿಧ ಶಾಲೆಗಳ ದ್ಯಾರ್ಥಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net