ಸಭೆಯಲ್ಲಿ ಮುಖ್ಯಾಧಿಕಾರಿ ಮಾತನಾಡಿ, ಮುಂದಿನ ಸಾಲಿನ ಬಜೆಟ್‌ನಲ್ಲಿ ರಸ್ತೆ, ಕುಡಿಯುವ ನೀರು, ಚರಂಡಿ, ಪಾರ್ಕ್ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ 20 ಕೋಟಿ ರೂ. ವೆಚ್ಚದ ಯೋಜನೆಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಸರ್ಕಾರದ ಅನುದಾನ ಹಾಗೂ ಕಂದಾಯ ಸೇರಿದಂತೆ ವಿವಿಧ ಮೂಲಗಳಿಂದ ನಿಧಿ ಸಂಗ್ರಹಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.