ಪಾಲೂರು ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಂಭ್ರಮ

ನಾಪೋಕ್ಲು ಸಮೀಪದ ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಷಷ್ಠಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ನಾಪೋಕ್ಲು ಸಮೀಪದ ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಷಷ್ಠಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
Published on
ನಾಪೋಕ್ಲು:ಸಮೀಪದ ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಷಷ್ಠಿ ಯನ್ನು ಬುಧವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಷಷ್ಠಿ ಹಬ್ಬದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ನಾಗನ ಪೂಜೆ, ರುದ್ರಾಭಿಷೇಕ, ಹಾಲು, ಎಳನೀರು ಸೇರಿದಂತೆ ವಿವಿಧ ಅಭಿಷೇಕವನ್ನು ಮಾಡಲಾಯಿತು. ಮಧ್ಯಾಹ್ನ ಮಹಾಪೂಜೆ ನೆರವೇರಿದ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಅರ್ಚಕ ಅರುಣ್ ಕುಮಾರ್ ಪೂಜಾ ವಿಧಿ-ವಿಧಾನ ನೆರವೇರಿಸಿದರು. ಈ ಸಂದರ್ಭ ದೇವಾಲಯದ ಪಾರುಪತ್ತೇದಾರ್ ಟಿ.ಕೆ. ಮನು, ತಕ್ಕ ಮುಖ್ಯಸ್ಥರು, ಭಕ್ತಾದಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net