ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ಕೋರನ ಸರಸ್ವತಿ ಮಾತನಾಡಿದರು. ಭಾರತದ ಸಂವಿಧಾನದ ಕುರಿತು ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಂವಿಧಾನದ ಪೀಠಿಕೆಯ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ರುದ್ರ, ಐಕ್ಯುಎಸಿ ಸಂಚಾಲಕ ಡಾ.ಕೆ.ಬಸವರಾಜು, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಎಂ.ಬಿ.ದಿವ್ಯಾ, ಉಪನ್ಯಾಸಕರಾದ ಹೇಮಂತ್‌ಕುಮಾರ್, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.