ಕೊಡಗು ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಿ.ಕೆ. ಸುದೀಪ್ ಕುಮಾರ್ ಮಾತನಾಡಿ, ಮುಂಬರುವ ವರ್ಷಗಳಲ್ಲಿ ಭಾರತ ಆರ್ಥಿಕತೆಯಲ್ಲಿ ವಿಶ್ವಗುರುವಾಗಬೇಕೆನ್ನುವ ಉದ್ದೇಶದಿಂದ ಇಂತಹ ಕಾರ್ಯಗಾರಗಳು, ಕಾರ್ಯಕ್ರಮಗಳನ್ನು ಪ್ರತಿ ತಾಲೂನಲ್ಲೂ ಹೆಚ್ಚಾಗಿ ಆಯೋಜಿಸಲಾಗುತ್ತಿದೆ. ಉದ್ದಿಮೆಗಳ ಸ್ಥಾಪನೆಗೆ ಸರ್ಕಾರದಿಂದ ದೊರೆಯುವ ಅನುದಾನ, ಸಹಾಯಧನ, ಸಹಕಾರದ ಬಗ್ಗೆ ಅರಿತುಕೊಳ್ಳಬೇಕಿದೆ. ಅದೇ ರೀತಿ ಉದ್ಯಮಿಗಳು ಬ್ಯಾಂಕುಗಳೊAದಿಗೆ ಉತ್ತಮ ಸಂಬAಧ ಹೊಂದುವುದರೊAದಿಗೆ ತಮ್ಮ ವ್ಯವಹಾರ ವಹಿವಾಟನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವ ಅಗತ್ಯವಿದೆ ಎಂದರು.