ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಯನ್ನು ಸಂತೋಷ್ ರೈ, ಬಾಚರಣಿಯಂಡ ಅನುಕಾರ್ಯಪ್ಪ, ಹಿರಿಕರ ರವಿ ಅವರಿಗೆ ಪ್ರದಾನ ಮಾಡಲಾಯಿತು. ಅಲ್ಲದೇ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿ ಪ್ರಶಸ್ತಿ ಪಡೆದ ನವೀನ್ ಡಿಸೋಜ, ಹಿರಿಕರ ರವಿ, ಕೆಯುಡಬ್ಲ್ಯೂಜೆ ಪ್ರಶಸ್ತಿ ವಿಜೇತ ಇಸ್ಮಾಯಿಲ್ ಕಂಡಕರೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಸಂಘದ ನೂತನ ಅಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ, ರಾಜ್ಯ ಸಂಘದ ನಿರ್ದೇಶಕಿ ಸವಿತಾ ರೈ, ಉದ್ಯಮಿ ಪ್ರಸನ್ನ ಎಡಿಕೇರಿ ಅವರನ್ನು ಸನ್ಮಾನಿಸಲಾಯಿತು.