ಸೈನಿಕ ಶಾಲೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ

ಸೈನಿಕ ಶಾಲೆ ಕೊಡಗಿನ ಎನ್‌ಸಿಸಿ ಘಟಕ ವತಿಯಿಂದ ಹಾರಂಗಿ ಜಲಾಶಯದ ಆವರಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು.
ಸೈನಿಕ ಶಾಲೆ ಕೊಡಗಿನ ಎನ್‌ಸಿಸಿ ಘಟಕ ವತಿಯಿಂದ ಹಾರಂಗಿ ಜಲಾಶಯದ ಆವರಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು.
Published on
ಕುಶಾಲನಗರ: ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್(ಎನ್‌ಸಿಸಿ) ದಿನಾಚರಣೆಯ ಪ್ರಯುಕ್ತ ಸೈನಿಕ ಶಾಲೆ ಕೊಡಗಿನ ಎನ್‌ಸಿಸಿ ಘಟಕ ವತಿಯಿಂದ ಕುಶಾಲನಗರದ ಸಮೀಪವಿರುವ ಹಾರಂಗಿ ಜಲಾಶಯದ ಆವರಣದಲ್ಲಿ ಶನಿವಾರ ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು.
ಅಭಿಯಾನದಲ್ಲಿ ಶಾಲೆಯ ಒಟ್ಟು 171 ಎನ್‌ಸಿಸಿ ವಿದ್ಯಾರ್ಥಿಗಳು ಮತ್ತು ಐವರು ಎನ್‌ಸಿಸಿ ಅಧಿಕಾರಿಗಳು ಭಾಗವಹಿಸಿದ್ದರು. ಬೆಳಗ್ಗಿನಿಂದಲೇ ಜಲಾಶಯದ ಆವರಣದಲ್ಲಿ ವಿದ್ಯಾರ್ಥಿಗಳು ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿದರು.
ಹಾರಂಗಿ ಜಲಾಶಯ ಪ್ರದೇಶದಲ್ಲಿ ದೀರ್ಘಕಾಲದಿಂದ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ಬಾಟಲಿಗಳು, ಪಾಲಿಥಿನ್ ಚೀಲಗಳು, ಕಾಗದ ಮತ್ತು ಇತರ ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಿದರು. ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳು ವೈಜ್ಞಾನಿಕ ಕ್ರಮದಲ್ಲಿ ತ್ಯಾಜ್ಯವನ್ನು ಬೇರ್ಪಡಿಸಿ, ಸೂಕ್ತ ವಿಲೇವಾರಿಗಾಗಿ ವ್ಯವಸ್ಥಿತವಾಗಿ ಸಂಗ್ರಹಿಸಿದರು.
ಸ್ವಚ್ಛತಾ ಅಭಿಯಾನ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜಿತ್‌ಸಿಂಗ್, ಆಡಳಿತ ಅಧಿಕಾರಿಗಳಾದ ವಿಂಗ್ ಕಮಾಂಡರ್ ಪಿ.ಪ್ರಕಾಶ್‌ರಾವ್ ಮತ್ತು ಉಪಪ್ರಾಂಶುಪಾಲ ಹಾಗೂ ಎನ್‌ಸಿಸಿ ಕಮಾಂಡಿಂಗ್ ಅಧಿಕಾರಿ ಸ್ಕ್ವಾಡ್ರನ್ ಲೀಡರ್ ಮಹಮ್ಮದ್ ಶಾಜಿ ಅವರ ಮಾರ್ಗದರ್ಶನ ಮತ್ತು ಪ್ರೋತ್ಸಾಹದೊಂದಿಗೆ ನಡೆಯಿತು. ಎನ್‌ಸಿಸಿ ಘಟಕದ ಲೆಫ್ಟಿನೆಂಟ್ ವಿಬಿನ್ ಕುಮಾರ್, ಪ್ರಮುಖರಾದ ಜಿ.ಕೆ.ಮಂಜಪ್ಪ, ವೈ.ವೆಂಕಟರಮಣ, ಪ್ರತಿಭಾ ಕಲ್ಯಾಣಿ, ಸುಬೇದಾರ್ ಬಲ್‌ಬೀರ್‌ಸಿಂಗ್, ಹವಾಲ್ದಾರ್ ಪ್ರವೀಣ್ ಪಕಾಲೆ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net