ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಫೀಕ್ ಖಾನ್ ಉದ್ಘಾಟಿಸಿದರು.
ಸುಂಟಿಕೊಪ್ಪ : ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಶನಿವಾರ ವಿಜ್ಞಾನ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ವಿಜ್ಞಾನ ಶಿಕ್ಷಕಿ ಬಿ.ಟಿ.ವರ್ಣಿತಾ ಈ ಸಂದರ್ಭ ಮಾತನಾಡಿ, ಖ್ಯಾತ ವಿಜ್ಞಾನಿ ಸರ್. ಸಿ.ವಿ. ರಾಮನ್ ಅವರು ‘ ಬೆಳಕಿನ ಪರಿಣಾಮ ( ರಾಮನ್ ಎಫೆಕ್ಟ್) ಕಂಡುಹಿಡಿದ ದಿನದ ಜ್ಞಾಪಕಾರ್ಥವಾಗಿ ಫೆ. 28ನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಂದರು. ವಿಜ್ಞಾನ ದಿನದ ಸಂದರ್ಭದಲ್ಲಿ
ಶಾಲಾ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನದ ಮೂಲಕ ತಮ್ಮಲ್ಲಿರುವ ಪ್ರಯೋಗಾತ್ಮಕ ಚಟುವಟಿಕೆಗಳನ್ನು ಪ್ರದರ್ಶನ ಮಾಡಿರುವುದು ಮಾದರಿಯಾಗಿದೆ ಎಂದರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಕುತೂಹಲವನ್ನು ಉತ್ತೇಜಿಸಲಿವೆ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಫೀಕ್ ಖಾನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ಕಾರಿ ಪ್ರೌಢಶಾಲಾ ಉಪ ಪ್ರಾಂಶುಪಾಲ ಬಾಲಕೃಷ್ಣ, ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಸಂಧ್ಯಾ, ಪ್ರಭಾರ ಮುಖ್ಯ ಶಿಕ್ಷಕಿ ಪಿ.ಇ.ನಂದಾ ಮತ್ತು ಪಾಲಕರು ಹಾಜರಿದ್ದರು.