ಕೊಡವ ಮುಸ್ಲಿಂ ಅಸೋಸಿಯೇಷನ್‌ನಿಂದ ಹುತ್ತರಿ ಆಚರಣೆ

ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಆಚರಿಸಲಾದ ಹುತ್ತರಿ (ಪುತ್ತರಿ) ಹಬ್ಬದ ಪ್ರಯುಕ್ತ ಆಲೀರ ಕುಟುಂಬಸ್ಥರ ಆತಿಥ್ಯದಲ್ಲಿ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮ ನಡೆಯಿತು. ದುದ್ದಿಯಂಡ ಹೆಚ್. ಸೂಫಿ ಹಾಜಿ, ಅಕ್ಕಳತಂಡ ಎಸ್. ಮೊಯ್ದು, ಹರಿಶ್ಚಂದ್ರ ಎ. ಹಂಸ, ಈತಲತಂಡ ರಫೀಕ್ ತೂಚಮಕೇರಿ, ಮೀತಲತಂಡ ಎಂ. ಇಸ್ಮಾಯಿಲ್ ಮತ್ತಿತರರು ಈ ಸಂದರ್ಭ ಇದ್ದರು.
ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಆಚರಿಸಲಾದ ಹುತ್ತರಿ (ಪುತ್ತರಿ) ಹಬ್ಬದ ಪ್ರಯುಕ್ತ ಆಲೀರ ಕುಟುಂಬಸ್ಥರ ಆತಿಥ್ಯದಲ್ಲಿ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮ ನಡೆಯಿತು. ದುದ್ದಿಯಂಡ ಹೆಚ್. ಸೂಫಿ ಹಾಜಿ, ಅಕ್ಕಳತಂಡ ಎಸ್. ಮೊಯ್ದು, ಹರಿಶ್ಚಂದ್ರ ಎ. ಹಂಸ, ಈತಲತಂಡ ರಫೀಕ್ ತೂಚಮಕೇರಿ, ಮೀತಲತಂಡ ಎಂ. ಇಸ್ಮಾಯಿಲ್ ಮತ್ತಿತರರು ಈ ಸಂದರ್ಭ ಇದ್ದರು.
Published on
ಗೋಣಿಕೊಪ್ಪಲು:
ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಹುತ್ತರಿ (ಪುತ್ತರಿ) ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಗುರುವಾರ ರಾತ್ರಿ ಮುಸ್ಲಿಂ ಸಮುದಾಯದವರು ದಕ್ಷಿಣ ಕೊಡಗಿನ ಕಾಟ್ರಕೊಲ್ಲಿಯಲ್ಲಿ ಅಲ್ಲಿನ ಆಲೀರ ಕುಟುಂಬಸ್ಥರ ಆತಿಥ್ಯದಲ್ಲಿ ಅದ್ದೂರಿಯಾಗಿ ಆಚರಿಸಿದರು.
ಕಾಟ್ರಕೊಲ್ಲಿಯ ಆಲೀರ ಎಂ. ಸಾದಲಿ ಅವರ ಗದ್ದೆಯಲ್ಲಿ ಈ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಕೆಎಂಎ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಲೀರ ಕುಟುಂಬದ ಹಿರಿಯರಾದ ಸಾದಲಿ ಭತ್ತದ ತೆನೆಯನ್ನು ಕುಯ್ದು ನೆರೆದಿದ್ದವರಿಗೆಲ್ಲ ಹಂಚಿದರು.
ಕಾರ್ಯಕ್ರಮದಲ್ಲಿ ಕೆ.ಎಂ.ಎ. ಉಪಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು, ಕೋಶಾಧಿಕಾರಿ ಹರಿಶ್ಚಂದ್ರ ಎ. ಹಂಸ, ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ, ಸಂಘಟನಾ ಕಾರ್ಯದರ್ಶಿ ಮೀತಲತಂಡ ಎಂ. ಇಸ್ಮಾಯಿಲ್ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಕೊಟ್ಟಮುಡಿ, ಕುಂಜಿಲ, ಚೆರಿಯಪರಂಬು ಎಡಪಾಲ, ಕೊಂಡAಗೇರಿ, ಗುಂಡಿಕೆರೆ, ಕೊಮ್ಮೆತೋಡು, ಚಾಮಿಯಾಲ, ವಿರಾಜಪೇಟೆ, ನಲ್ವತ್ತೋಕ್ಲು, ಅಂಬಟ್ಟಿ, ಚಿಮ್ಮಿಚ್ಚಿಕುಂಡ್ (ಹಳ್ಳಿಗಟ್ಟು), ಮೊದಲಾದ ಪ್ರದೇಶಗಳ ಸದಸ್ಯರು, ಕಾಟ್ರಕೊಲ್ಲಿಯ ಆಲೀರ ಕುಟುಂಬಸ್ಥರು, ಹಲವಾರು ಗ್ರಾಮಸ್ಥರು ಮತ್ತು ಮಕ್ಕಳು ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ನಡೆದ ಸಭಾ ಕಾರ್ಯಕ್ರಮದಲ್ಲಿ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ ಮಾತನಾಡಿ, ಕೊಡವ ಮುಸ್ಲಿಮರ ಸಾಂಪ್ರದಾಯಿಕ ಆಚರಣೆಗಳನ್ನು ಮತ್ತು ಪದ್ಧತಿ ಪರಂಪರೆಯನ್ನು ಸಂರಕ್ಷಿಸಬೇಕಾದ ಅನಿವಾರ್ಯತೆಯಿದೆ ಎಂದರು. ಕೆ.ಎಂ.ಎ. ನಿರ್ದೇಶಕರು ಮತ್ತು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲೀರ ರಶೀದ್, ಕಾಟ್ರಕೊಲ್ಲಿಯ ಆಲೀರ ಕುಟುಂಬದ ಪ್ರಮುಖರಾದ ಎ. ಎ. ಆಜೀಜ್, ಆಲೀರ ಅಬ್ದುಲ್ಲ, ಆಲೀರ ಹುಸೈನ್, ಆಲೀರ ಸಿದ್ದೀಕ್, ಆಲೀರ ಮೊಯ್ದು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.
ಕದಿರು ತೆಗೆದ ಬಳಿಕ ಆಲೀರ ಐನ್ ಮನೆ ಆವರಣದಲ್ಲಿ ಸಾಂಪ್ರದಾಯಿಕ ತಂಬಿಟ್ಟು- ಪುತ್ತರಿ ಗೆಣಸು ಉಪಹಾರವನ್ನು ಹಾಗೂ ಕೆ.ಎಂ.ಎ. ಉಪಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು ಅವರ ಮನೆಯ ಆವರಣದಲ್ಲಿ ಊಟೋಪಚಾರವನ್ನು ವ್ಯವಸ್ಥೆಗೊಳಿಸಲಾಗಿತ್ತು. ಊಟದ ನಂತರ ಗದ್ದೆಯಿಂದ ತರಲಾದ ಕದಿರನ್ನು ತಮ್ಮ ತಮ್ಮ ಮನೆಗಳಿಗೆ ಕೊಂಡೊಯ್ಯಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net