ಕಂಚಿಕಾಮಾಕ್ಷಿ ದೇವಾಲಯದಲ್ಲಿ ಸಂಭ್ರಮದ ಕೃಷ್ಣಾಷ್ಟಮಿ

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ ಶ್ರೀಕೃಷ್ಣ ಹಾಗೂ ರಾಧೆಯ ಛದ್ಮವೇಷ ಸ್ಪರ್ಧೆಯೂ ಎಲ್ಲರ ಗಮನ ಸೆಳೆಯಿತು.
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ ಶ್ರೀಕೃಷ್ಣ ಹಾಗೂ ರಾಧೆಯ ಛದ್ಮವೇಷ ಸ್ಪರ್ಧೆಯೂ ಎಲ್ಲರ ಗಮನ ಸೆಳೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಕಂಚಿಕಾಮಾಕ್ಷಿ ದೇವಾಲಯದಲ್ಲಿ ಸಂಭ್ರಮದ ಕೃಷ್ಣಾಷ್ಟಮಿ
ಮಡಿಕೇರಿ: ನಗರದ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಶ್ರೀಕೃಷ್ಣಾಷ್ಟಮಿ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು. ಶ್ರೀ ರಾಮಾಂಜನೇಯ ಭಜನಾ ಮಂಡಳಿ ವತಿಯಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು. ರೋಮಾಂಚನ ಮೂಡಿಸಿದ ಮೊಸರು ಕುಡಿಕೆ ಸ್ಪರ್ಧೆಶ್ರೀಕೃಷ್ಣ ಜಯಂತಿ ಅಂಗವಾಗಿ ದೇವಾಲಯದ ವತಿಯಿಂದ ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಕಿರಣ್ ಕನಕರಾಜ್ ಹಾಗೂ ಅರುಣ್ ಚಿನ್ನಣ್ಣ ಅವರು ಮೊಸರು ಕುಡಿಕೆ ಒಡೆಯುವಲ್ಲಿ ಯಶಸ್ವಿಯಾದರು. ಸುತ್ತಲೂ ರಭಸದ ನೀರಿನ ಹೊಡೆತಗಳಿದ್ದರೂ ಅದನ್ನು ಲೆಕ್ಕಿಸದೆ ಇಬ್ಬರೂ ಸಾಹಸದಿಂದ ಕುಡಿಕೆ ಒಡೆದು ಗಮನ ಸೆಳೆದರು.
ಇದೇ ಸಂದರ್ಭದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ ಶ್ರೀಕೃಷ್ಣ ಹಾಗೂ ರಾಧೆಯ ಛದ್ಮವೇಷ ಸ್ಪರ್ಧೆಯೂ ಎಲ್ಲರ ಗಮನ ಸೆಳೆಯಿತು. ೩೦ಕ್ಕೂ ಅಧಿಕ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಛದ್ಮವೇಷ ಸ್ಪರ್ಧೆಯಲ್ಲಿ ಆಯುಷ್ ಪ್ರಥಮ, ರಿಯಾಂಶಿ ದ್ವಿತೀಯ ಹಾಗೂ ಆದಿತ್ ತೃತೀಯ ಸ್ಥಾನ ಪಡೆದುಕೊಂಡರು.
ಸ್ಪರ್ಧೆಯ ತೀರ್ಪುಗಾರರಾಗಿ ಉಪನ್ಯಾಸಕಿ ಹಾಗೂ ಸಾಹಿತಿ ಜಯಲಕ್ಷ್ಮಿ.ಕೆ, ಮೈಸೂರಿನ ಹಿಂದೂಸ್ತಾನ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರಿಯಾ ರವಿಕುಮಾರ್ ಹಾಗೂ ಅಂಗನವಾಡಿ ಶಿಕ್ಷಕಿ ಎನ್.ಎ.ಗೀತಾ ಅವರು ಕಾರ್ಯನಿರ್ವಹಿಸಿದರು.
ಸಮಾರೋಪ ಸಮಾರಂಭದಲ್ಲಿ ಮೊಸರು ಕುಡಿಕೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು. ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ದೇವಾಲಯಕ್ಕೆ ಭೇಟಿ ನೀಡಿ, ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net