ಆಶುಭಾಷಣ ಸ್ಪರ್ಧೆಯಲ್ಲಿ ಕುಶಾಲ್ ರಾಜ್ಯ ಮಟ್ಟಕ್ಕೆ ಆಯ್ಕೆ

ಆಶು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಸಿ.ಎಂ. ಕುಶಾಲ್.
ಆಶು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಸಿ.ಎಂ. ಕುಶಾಲ್.
Published on
ಕುಶಾಲನಗರ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಆಶು ಭಾಷಣ ಸ್ಪರ್ಧೆಯಲ್ಲಿ ಶಿರಂಗಾಲದ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ 10ನೇ ತರಗತಿಯ ವಿದ್ಯಾರ್ಥಿ ಸಿ.ಎಂ.ಕುಶಾಲ್ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶೈಲಜಾ ತಿಳಿಸಿದ್ದಾರೆ. ವಿದ್ಯಾರ್ಥಿಯನ್ನು ಶಾಲಾ ಮುಖ್ಯಸ್ಥರು, ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net