ಕುಶಾಲನಗರ : ನಗರದ ಮುಖ್ಯ ರಸ್ತೆಗಳಲ್ಲಿ ಅನಧಿಕೃತವಾಗಿ ಅಳವಡಿಸಿದ ಬೋರ್ಡ್, ಬ್ಯಾನರ್‌ಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಕುಶಾಲನಗರ ಪುರಸಭೆಯ ಸಿಬ್ಬಂದಿ ಸೋಮವಾರ ಕಾರ್ಯಾಚರಣೆ ಆರಂಭಿಸಿದ್ದಾರೆ.
ಜಾಹೀರಾತು ಫಲಕ, ಬ್ಯಾನರ್ ಅಳವಡಿಸುವವರು ಪುರಸಭೆಗೆ ನಿಗದಿತ ಶುಲ್ಕ ಪಾವತಿ ಮಾಡಬೇಕು.
ಪರವಾನಗಿ ಪಡೆದಿರಬೇಕು. ಇಲ್ಲದಿದ್ದರೆ ಅಂಥಹಾ ಫಲಕಗಳನ್ನು ಮುಲಾಜಿಲ್ಲದೇ ತೆರವು ಗೊಳಿಸುವುದಾಗಿ ಪುರಸಭೆಯ ಆರೋಗ್ಯ ಅಧಿಕಾರಿ ಉದಯಕುಮಾರ್ ಈ ಸಂದರ್ಭ ಎಚ್ಚರಿಕೆ ನೀಡಿದರು.
ತೆರವು ಕಾರ್ಯಾಚರಣೆ ಮುಂದುವರಿಯಲಿದ್ದು, ಶುಲ್ಕ ಪಾವತಿ ಬಾಕಿ ಉಳಿಸಿಕೊಂಡವರು ಗಮನ ಹರಿಸಬೇಕು ಎಂದು ಅವರು ತಿಳಿಸಿದರು.