ಕ್ರೀಡೆ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಕಾರಿ

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ನಾಗರತ್ನ ಅವರು ಪುಷ್ಪಾರ್ಚನೆ ಮಾಡಿದರು. ಕೃಷ್ಣಪ್ಪ, ಶ್ರೀನಿವಾಸ್ ಇತರರಿದ್ದರು.
ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ನಾಗರತ್ನ ಅವರು ಪುಷ್ಪಾರ್ಚನೆ ಮಾಡಿದರು. ಕೃಷ್ಣಪ್ಪ, ಶ್ರೀನಿವಾಸ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕ್ರೀಡೆ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಕಾರಿ
  • ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಕೃಷ್ಣಪ್ಪ
ಕುಶಾಲನಗರ: ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಅಭಿಪ್ರಾಯಪಟ್ಟರು.
ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ಮೈದಾನದಲ್ಲಿ ಬುಧವಾರ ನಡೆದ ಕುಶಾಲನಗರ ಎ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯು ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ ಎಂದರು.
ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ, ಸೋಲೇ ಗೆಲುವಿನ ಸೋಪಾನ ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ ಎಂದರು.
ಶಾಲೆಯ ಉಪ ಪ್ರಾಂಶುಪಾಲ ನಾಗರತ್ನ ಮಾತನಾಡಿ, ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡಿದಾಗ ಆರೋಗ್ಯವಂತರಾಗಿರಬಹುದು. ಈ ಮೂಲಕ ಪರಿಪೂರ್ಣ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಮೊಬೆಲ್ ಬಳಕೆ ಕಡಿಮೆ ಮಾಡಿಕೊಂಡು ಅದರಿಂದ ಆಗುವ ದುಷ್ಪರಿಣಾಮದಿಂದ ದೂರವಿರಿ ಎಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶ್ರೀನಿವಾಸ್ ಮಾತನಾಡಿ, ವ್ಯಕ್ತಿಯ ಸದೃಢವಾದ ಮಾನಸಿಕ ಮತ್ತು ದೈಹಿಕ ಆರೋಗ್ಯ ಬೆಳವಣಿಗೆಗೆ ಕ್ರೀಡೆಯು ಪೂರಕ ಶಕ್ತಿಯಾಗಿದೆ. ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯ ಬೆಳವಣಿಗೆ ಮತ್ತು ಕ್ರೀಡಾ ಕ್ಷೇತ್ರದ ಬೆಳವಣಿಗೆಗಾಗಿ ಕ್ರೀಡಾಕೂಟಗಳನ್ನು ನಡೆಸಲಾಗುತ್ತದೆ. ವಿದ್ಯಾರ್ಥಿಗಳು ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಿಕೊಂಡು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದರು.
ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಸೋಲು ಗೆಲುವುಗಳನ್ನು ಸಮವಾಗಿ ಸ್ವೀಕರಿಸಿ ಈ ಮೂಲಕ ಉತ್ತಮವಾಗಿ ಪ್ರದರ್ಶನ ನೀಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಹೆಬ್ಬಾಲೆ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬೋಜೇಗೌಡ ಅವರು ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭ ದೈಹಿಕ ಶಿಕ್ಷಣ ಶಿಕ್ಷಕರಾದ ಸದಾಶಿವಯ್ಯ ಎಸ್.ಪಲ್ಲೇದ್, ಪ್ರತಾಪ್, ಶೈಲಾ, ಗಣೇಶ್ ಕುಮಾರ್, ಉತ್ತಪ್ಪ, ಹಳೆ ವಿದ್ಯಾರ್ಥಿಗಳ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಆದಂ, ತೀರ್ಪುಗಾರರಾದ ಚೇತನ್, ಸುರೇಶ್ ಕುಮಾರ್, ದೇವಾನಂದ, ಪ್ರಮೋದ್, ಪ್ರವೀಣ್ ಪಾಟೀಲ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net