ಉತ್ತಮ ಸಂಸ್ಕಾರಗಳೊಂದಿಗೆ ವ್ಯಕ್ತಿತ್ವ ರೂಪಿಸಿಕೊಳ್ಳಿ

ಕನ್ನಡ ಭಾರತಿ ಪದವಿ ಹಾಗೂ ಪಿಯು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನು ್ನ ತಹಸೀಲ್ದಾರ್ ಕಿರಣ್ ಗೌರಯ್ಯ ಉದ್ಗಾಟಿಸಿದರು. ಪ್ರಾಂಶುಪಾಲ ಶಾಂತಕುಮಾರ್, ಮಂಜುನಾಥ, ಪುಟ್ಟರಾಜು, ರಾಮಕೃಷ್ಣ, ನಾಗೇಂದ್ರ ಸ್ವಾಮಿ, ರುದ್ರಪ್ಪ ಇದ್ದರು.
ಕನ್ನಡ ಭಾರತಿ ಪದವಿ ಹಾಗೂ ಪಿಯು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನು ್ನ ತಹಸೀಲ್ದಾರ್ ಕಿರಣ್ ಗೌರಯ್ಯ ಉದ್ಗಾಟಿಸಿದರು. ಪ್ರಾಂಶುಪಾಲ ಶಾಂತಕುಮಾರ್, ಮಂಜುನಾಥ, ಪುಟ್ಟರಾಜು, ರಾಮಕೃಷ್ಣ, ನಾಗೇಂದ್ರ ಸ್ವಾಮಿ, ರುದ್ರಪ್ಪ ಇದ್ದರು.
Published on
ಕುಶಾಲನಗರ: ವಿದ್ಯಾರ್ಥಿಗಳು ಉತ್ತಮ ಸಂಸ್ಕಾರಗಳೊಂದಿಗೆ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಸಲಹೆ ನೀಡಿದರು.
ಶನಿವಾರ ಕುಶಾಲನಗರದ ಕನ್ನಡ ಭಾರತಿ ಪದವಿ ಹಾಗೂ ಪಿಯು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಕಾಲೇಜು ಜೀವನ ಏಕಾಗ್ರತೆ ಹಾಗೂ ಶ್ರದ್ಧೆಯಿಂದ ಕೂಡಿರಬೇಕು.ಹಾಗಿದ್ದಲ್ಲಿ ಮಾತ್ರ ವಿದ್ಯಾರ್ಥಿಗಳು ಕಂಡ ಕನಸು ನನಸಾಗಿಸಲು ಸಾಧ್ಯ. ವಿದ್ಯಾರ್ಥಿಗಳು ಪಾಲಕರು ಹಾಗೂ ಗುರು ಹಿರಿಯರಿಗೆ ಸದಾ ವಿಧೇಯರಾಗಿರಬೇಕು ಎಂದರು.
ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಪುಟ್ಟರಾಜು ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕೆ ಅವರಲ್ಲಿನ ಶಿಸ್ತು ಹಾಗೂ ಸಮಯ ಪಾಲನೆ ಮುಖ್ಯ ಪಾತ್ರ ವಹಿಸುತ್ತದೆ. ಪಾಲಕರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಸಮನ್ವಯತೆ ಅತಿ ಮುಖ್ಯ. ವಿದ್ಯಾರ್ಥಿಗಳು ಮೊಬೈಲ್‌ಗಳಿಂದ ದೂರವಿದ್ದು ಪಠ್ಯದತ್ತ ಹೆಚ್ಚು ಗಮನಕೊಡಬೇಕು ಎಂದರು.
ದೇಶಕ್ಕಾಗಿ ತ್ಯಾಗ ಬಲಿದಾನಗೈದ ಮಹಾಪುರುಷರ ಆದರ್ಶಗಳು ವಿದ್ಯಾರ್ಥಿಗಳಲ್ಲಿ ಅರಳಬೇಕಿದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣದತ್ತ ಒಲವು ತೋರಬೇಕು ಎಂದರು.
ಉನ್ನತ ಶಿಕ್ಷಣ ಸಂಸ್ಥೆಗಳು ರಾಜ್ಯದಲ್ಲಿ ಸಾಕಷ್ಟಿದ್ದರೂ ಕೂಡ ನಮ್ಮ ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಶೇ 33 ರಷ್ಟಿದೆ ಎಂದು ವಿಷಾದಿಸಿದರು.
ಮೈಸೂರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಬೈಲಕೊಪ್ಪದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಬಿ.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪಿಯು ವಿಭಾಗದ ಪ್ರಾಂಶುಪಾಲ ಶಾಂತಕುಮಾರ್, ವಿದ್ಯಾಟ್ರಸ್ಟ್ ಕಾರ್ಯದರ್ಶಿ ಬಿ.ರಾಮಕೃಷ್ಣಯ್ಯ, ಆಡಳಿತಾಧಿಕಾರಿ ಜಯವರ್ಧನ, ಕಾಲೇಜಿನ ಪದವಿ ವಿಭಾಗದ ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ, ಹಿರಿಯ ಉಪನ್ಯಾಸಕರಾದ ಡಾ.ನಾಗೇಂದ್ರ ಸ್ವಾಮಿ, ಸೌಮ್ಯ, ರಶ್ಮಿತಾ,ಉಪನ್ಯಾಸಕಿ ವಿನೀತಾ ಪಾಲಕರು ಹಾಗೂ ವಿದ್ಯಾರ್ಥಿಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net