ಕೂಲಿ ಕಾರ್ಮಿಕ ಆತ್ಮಹತ್ಯೆ

ಮೃತ ಆನಂದ
ಮೃತ ಆನಂದ
Published on

ತಾಲೂಕಿನ ಸಿದ್ಧಾರ್ಥ ನಗರದಲ್ಲಿ ಗುರುವಾರ ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿದ್ಧಾರ್ಥ ನಗರದ ನಿವಾಸಿ ಬಿ.ಪಿ.ಆನಂದ (36) ಆತ್ಮಹತ್ಯೆ ಮಾಡಿಕೊಂಡವರು. ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ.
ಬಿ.ಪಿ.ಆನಂದ ಅವರು ಖಾಸಗಿ ಫೈನಾನ್ಸ್ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಮರುಪಾವತಿ ಮಾಡಲು ಸಾಧ್ಯವಾಗದ ಕಾರಣ ಮನನೊಂದು ನೇಣಿಗೆ ಶರಣಾಗಿದ್ದಾರೆ ಎಂದು ಪತ್ನಿ ಕಾವ್ಯಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸ್ ಇನ್‌ಸ್ಪೆಕ್ಟರ್ ಮುದ್ದು ಮಹದೇವ, ಸಬ್‌ಇನ್‌ಸ್ಪೆಕ್ಟರ್ ಖತೀಜಾ, ಕನ್‌ಸ್ಟೇಬಲ್ ಸತೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net